
ಜಮಖಂಡಿ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ.
ಮೃತ ಮಹಿಳೆಯನ್ನು 50 ವರ್ಷದ ಗೌರವ ಹಣಮಂತ ಕಡಪಟ್ಟಿ ಎಂದು ಗುರುತಿಸಲಾಗಿದೆ. ಅವರ ಪತಿ 60 ವರ್ಷದ ಹಣಮಂತ ಯಂಕಪ್ಪ ಕಡಪಟ್ಟಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.
ದಂಪತಿ ಬೀಳಗಿ ತಾಲೂಕಿನ ಗುಲಬಾಳ ಗ್ರಾಮದಿಂದ ಸಿದ್ದಾಪುರ ಗ್ರಾಮಕ್ಕೆ ತಮ್ಮ ಮೊಮ್ಮಗಳನ್ನು ಭೇಟಿಯಾಗಿ, ಬಳಿಕ ಸ್ವಗ್ರಾಮಕ್ಕೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಬೈಕ್ ಸವಾರನನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಮಖಂಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಪೆÇಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.





















