
ಕೊಪ್ಪಳ,ಮೇ.೨೭-ಯಲಪುರ್ಗ ತಾಲೂಕಿನ ಮಾಟಲತಿನ್ನಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೫೦ ರಲ್ಲಿ, ಚಾಲಕ ನಿದ್ದೆಯ ಮಂಪರಿನಲ್ಲಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯೊಂದು ಪಲ್ಟಿಯಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಗುಜರಾತ್‌ನ ಅಹಮದಾಬಾದ್‌ನಿಂದ ಔಷಧಿಗಳನ್ನು ತುಂಬಿದ ಟ್ರಕ್ ಬೆಂಗಳೂರಿಗೆ ಹೊರಡುತ್ತಿತ್ತು. ಈ ಸಮಯದಲ್ಲಿ, ಚಾಲಕ ನಿದ್ದೆ ಮಂಪರಿನಲ್ಲಿ ಟ್ರಕ್ ಚಲಾಯಿಸಿ, ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ, ಲಾರಿ ಪಲ್ಟಿಯಾಗಿದ್ದು, ಔಷಧ ತುಂಬಿದ ಪೆಟ್ಟಿಗೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕೋಟಿಗಟ್ಟಲೆ ಬೆಲೆಬಾಳುವ ಔಷಧಗಳು ವ್ಯರ್ಥವಾಗಿದೆ.
ಅಪಘಾತದಲ್ಲಿ ಚಾಲಕರಾದ ಮೊಹಮ್ಮದ್ ಜಾಕೀರ್ ಹುಸೇನ್ ಮತ್ತು ಮೊಹಮ್ಮದ್ ಪಾಷಾ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.