Home ಜಿಲ್ಲೆ ಬೆಂಗಳೂರು ರಾಜಕಾರಣಿಗಳಿಗೆ ಮಧುಸೂದನ ಸಾಯಿ ಪ್ರೇರಣೆ

ರಾಜಕಾರಣಿಗಳಿಗೆ ಮಧುಸೂದನ ಸಾಯಿ ಪ್ರೇರಣೆ

ಚಿಕ್ಕಬಳ್ಳಾಪುರ, ಅ. ೧೬: ರಾಜಕಾರಣಿಗಳ ಭಾಷಣಗಳಿಗೆ ಸೀಮಿತವಾಗಿರುವ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಪರಿಕಲ್ಪನೆ ಮುದ್ದೇನಹಳ್ಳಿಯಂಥ ಪುಟ್ಟ ಗ್ರಾಮದಲ್ಲಿ ಸಾಕಾರಗೊಳ್ಳುತ್ತಿದೆ. ನಿಸ್ವಾರ್ಥ ಸೇವೆಯ ಮೂಲಕ ಶಿಕ್ಷಣ, ಪೌಷ್ಟಿಕತೆ ಮತ್ತು ಮಾನವೀಯ ಮೌಲ್ಯಗಳ ಪ್ರಸಾರಕ್ಕೆ ಶ್ರಮಿಸುತ್ತಿರುವ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಸರ್ಕಾರಗಳು ಮತ್ತು ರಾಜಕಾರಣಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.


ಮುದ್ದೇನಹಳ್ಳಿ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಪೌಷ್ಟಿಕ ಆಹಾರವನ್ನೂ ಒದಗಿಸಬೇಕು ಎಂಬುದು ತಮ್ಮ ಕನಸಾಗಿತ್ತು. ಆದರೆ, ದೀರ್ಘಾವಧಿಯ ಅಧಿಕಾರಾವಕಾಶ ದೊರೆಯದ ಕಾರಣ ಆ ಕನಸನ್ನು ಸಂಪೂರ್ಣವಾಗಿ ಸಾಕಾರಗೊಳಿಸಲು ಸಾಧ್ಯವಾಗಲಿಲ್ಲ. ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ನಿಸ್ವಾರ್ಥ ಸೇವೆಯ ಮೂಲಕ ಆ ಕನಸನ್ನು ನನಸು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಇದೇ ಸಂದರ್ಭದಲ್ಲಿ ಖ್ಯಾತ ಹಾರ್ಮೋನಿಯಂ ಕಲಾವಿದ ಡಾ. ರವೀಂದ್ರ ಕಟೋಟಿ ಅವರಿಂದ ಅಮೃತಮಾಲಾ ಸಂಗೀತ ಕಾರ್ಯಕ್ರಮ ನಡೆಯಿತು.
ಪ್ರಶಾಂತಿ ಬಾಲಮಂದಿರ ಟ್ರಸ್ಟ್ ಅಧ್ಯಕ್ಷ ಬಿ.ಎನ್. ನರಸಿಂಗಮೂರ್ತಿ ಮಾತನಾಡಿದರು.