
ಕಲಬುರಗಿ,ಅ.7-ತಾಲೂಕಿನ ಜಾಪುರ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯಗುರು ದೇವೇಂದ್ರಪ್ಪ ಗಣಮುಖಿ ಅವರ ನೇತೃತ್ವದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಸುನಿಲ್ ಕುಮಾರ್ ಎಚ್. ಒಂಟಿ ಅವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಪೀರಪ್ಪ ದೊಡ್ಡಮನಿ, ಶರಣಬಸಪ್ಪ ಪೂಜಾರಿ, ಅನಿಲ್ ದೊಡ್ಡಮನಿ, ಉಮೇಶ್ ದೊಡ್ಡಮನಿ ಸೇರಿದಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.