Home ಜಿಲ್ಲೆ ಮಹಾತ್ಮ ಗಾಂಧಿ ರಾಷ್ಟ್ರೀಯ ಪ್ರಶಸ್ತಿ: ಎಕಲಾರಕಗೆ ಸನ್ಮಾನ

ಮಹಾತ್ಮ ಗಾಂಧಿ ರಾಷ್ಟ್ರೀಯ ಪ್ರಶಸ್ತಿ: ಎಕಲಾರಕಗೆ ಸನ್ಮಾನ

ಬೀದರ್:ಮೇ.11: ಬೆಂಗಳೂರಿನ ಸನಾತನ ಫೌಂಡೇಷನ್‍ನ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅವರನ್ನು ನಗರದ ನೌಬಾದನ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಸನ್ಮಾನಿಸಲಾಯಿತು.
ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹೂಮಾಲೆ ಹಾಕಿ ಗೌರವಿಸಲಾಯಿತು.
ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ವಿದ್ಯಾಸಾಗರ್ ಸಿಂಧೆ, ಅಜಮತ್ ಪಟೇಲ್, ಉಮೇಶ ಆಣದೂರು ಮತ್ತಿತರರು ಇದ್ದರು.