ಮಹಾತ್ಮಾ ಗಾಂಧೀಜಿಯವರ ಜಯಂತಿ ಆಚರಣೆ

ಧಾರವಾಡ,ಅ 3: ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ, ಸ್ವದೇಶಿ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಮಹಾತ್ಮಾ ಗಾಂಧೀಜಿಯವರು ಭಾಗವಹಿಸಿದ್ದರು. ಆಂದೋಲನವನ್ನು ಜನಾಂದೋಲವಾಗಿ ಪರಿವರ್ತಿಸಿದರು. ಜನ ಸಾಮಾನ್ಯರಿಂದ ಹೋರಾಟ ನಡೆಸಿದರು. ಅನೇಕ ಸತ್ಯಾಗ್ರಹಗಳನ್ನು ಜನಾಂದೋಲದಿಂದ ನಡೆಸಿದ ಕೀರ್ತಿ ಗಾಂಧೀಜಿ ಅವರಿಗೆ ಸಲ್ಲುತ್ತದೆ. ಗಾಂಧೀಜಿಯವರು ದೇಶ ನೆನಪಿಡುವ ಐಕಾನ್ ಆಗಿದ್ದಾರೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಹೇಳಿದರು.


ಅವರು ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಮಹಾತ್ಮಾ ಗಾಂಧಿಯವರ 156 ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 124 ನೇ ಜಯಂತಿಯನ್ನು ಇಂದು ನಾವು ಆಚರಿಸುತ್ತಿದ್ದೇವೆ. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರಧಾನ ಮಂತ್ರಿಗಳಾಗಿ ಉತ್ತಮ ಆಡಳಿತವನ್ನು ನೀಡಿದರು. ತಾμÉ್ಕಂಟ್ ಒಪ್ಪಂದದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಶಾಸ್ತ್ರಿಯವರು ಜೀವನದ ನೈತಿಕತೆ ತಿಳಿದು ಜೀವನ ಸವೆಸಿದ್ದಾರೆ ಎಂದು ಹೇಳಿದರು.


ಉತ್ತರ ಭಾರತದಲ್ಲಿ ಪೇಟಾ ಹಾಕುವುದು ಸಾಮಾನ್ಯವಾಗಿತ್ತು, ಅದನ್ನು ಬ್ರಿಟಿಷರು ತೆಗೆದು ಹಾಕಿದರು. ಅನಂತರದಲ್ಲಿ ಗಾಂಧೀಜಿಯವರು ಟೋಪಿಗೆ ಹೆಚ್ಚಿನ ಮಹತ್ವ ತಂದುಕೊಟ್ಟರು. ನಂತರದ ದಿನಗಳಲ್ಲಿ ಗಾಂಧಿ ಟೋಪಿ ಎಂದು ಖ್ಯಾತಿ ಪಡೆದುಕೊಂಡಿತು ಎಂದು ಅವರು ಗಾಂಧಿ ಟೋಪಿ ಬಗ್ಗೆ ತಿಳಿಸಿದರು.


ಶಾಸಕರಾದ ಎನ್.ಎಚ್ ಕೋನರಡ್ಡಿ ಅವರು ಮಾತನಾಡಿ, ಗಾಂಧೀಜಿಯವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು. ಅವರ ರಾಜಕೀಯ ಆಡಳಿತ ವ್ಯವಸ್ಥೆ ನಮಗೆ ಮಾದರಿಯಾಗಿದೆ. ಸತ್ಯ ಮತ್ತು ಅಹಿಂಸೆ ಮಾರ್ಗದಲ್ಲಿ ಅವರು ನಡೆದರು. ಸತ್ಯಾಗ್ರಹ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವೀಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಗ್ರಾಮ ವ್ಯವಸ್ಥೆ ಮುಖ್ಯ. ಆರ್ಥಿಕ, ಸಾಮಾಜಿಕ ಸಮಾನತೆಗೆ ಮುಂದಾಗಬೇಕು ಎಂದರು.
ಗಾಂಧಿ ಚರಿತ್ರೆಯಲ್ಲಿ 1924 ರ ಬೆಳಗಾವಿ ಅಧಿವೇಶನ ಅತಿದೊಡ್ಡ ಮೈಲಿಗಲ್ಲಾಗಿದೆ. ಗಾಂಧಿ ತತ್ವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸರ್ವಧರ್ಮದ ಗುರುಗಳು ಭಾಗವಹಿಸಿದ ಸಮಾರಂಭ ಇದಾಗಿದೆ. ದೇಶ ಒಂದು ಎಂಬ ಭಾವನೆಯಲ್ಲಿ ನಾವು ಮುನ್ನೆಡಯಬೇಕು. ಗಾಂಧಿ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ಇಂದು ವಿಜಯದಶಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಹುಬ್ಬಳ್ಳಿ ಧಾರವಾಡ ಬೃಹತ್ ಬೆಂಗಳೂರು ಮಾದರಿಯಲ್ಲಿ ಬೆಳವಣಿಗೆಯಾಗಬೇಕು ಎಂದು ಶಾಸಕ ಎನ್ ಎಚ್ ಕೋನರಡ್ಡಿ ಅವರು ಆಶಿಸಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೀವನ ಸವೆಸಿದ್ದಾರೆ. ಗಾಂಧೀಜಿಯವರ ಅಹಿಂಸೆ ತತ್ವ ನಮಗೆ ದಾರಿದೀಪವಾಗಿದೆ. ಅದೇ ಮಾರ್ಗದಲ್ಲಿ ನಾವು ನಡೆಯಬೇಕು. ದಸರಾ ಹಬ್ಬವನ್ನು ರಾಮನು ರಾವಣನ ಮೇಲೆ ಜಯ ಸಾಧಿಸಿದ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಗಾಂಧೀಜಿಯವರ ತತ್ವದಾರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. “ಮೈ ಎಕ್ಸಪೀರಿಮೆಂಟ್ ವಿಥ್ ಟ್ರುಥ್” ಎಂಬ ಗ್ರಂಥವನ್ನು ರಚಿಸಿದ್ದಾರೆ. ಶಾಲಾ ದಿನದಲ್ಲಿ ಮಾಡಿದ ತಪ್ಪನ್ನು ಜೀವನದಲ್ಲಿ ಎಂದಿಗೂ ಮಾಡುವುದಿಲ್ಲ ಎಂದು ಶಪಥ ಮಾಡಿದ್ದರು. ತಮ್ಮ ಜೀವನದುದ್ದಕ್ಕೂ ಸತ್ಯದ ದಾರಿಯಲ್ಲಿ ಅವರು ನಡೆದರು. ಅವರಂತೆ ನಾವು ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.


ವಿವಿಧ ಧರ್ಮದ ಧರ್ಮಗುರುಗಳಾದ ಡೇವಿಡ್, ಹಫೀಜ್ ಖಾದ್ರಿ ಮತ್ತು ಮಹೇಶ ಭಟ್ ಅವರು ಸರ್ವಧರ್ಮ ಪ್ರಾರ್ಥನೆಯನ್ನು ಸಲ್ಲಿಸಿದರು.
ಗಣ್ಯರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುμÁ್ಪರ್ಪಣೆ ಅರ್ಪಿಸಿದರು. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.


ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಮಾಜಿ ಸಂಸದ ಐ.ಜಿ.ಸನದಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಡಿಡಿಪಿಐ ಎಸ್.ಎಸ್.ಕೆಳದಿಮಠ, ಡಾ.ಸಂಜೀವ ಕುಲಕರ್ಣಿ, ಡಾ. ರಾಜೇಂದ್ರ ಪೆÇದ್ದಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಲಯ 3 ರ ವಲಯಸಹಾಯಕ ಆಯುಕ್ತ ಅರವಿಂದ ಜಮಖಂಡಿ ಸೇರಿದಂತೆ ಇತರರು ವೇದಿಕೆಯಲ್ಲಿದ್ದರು.


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ (ಪ್ರ) ಡಾ. ಎಸ್.ಎಂ.ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಾರ್ಗವಿ ಕುಲಕರ್ಣಿ ಮತ್ತು ತಂಡದವರು ನಾಡಗೀತೆ, ಗಾಂಧಿ ಭಜನೆಯನ್ನು ಪ್ರಸ್ತುತ ಪಡಿಸಿದರು. ಶಶಿರೇಖಾ ಚಕ್ರಸಾಲಿ ಅವರು ಅತಿಥಿ ಪರಿಚಯಿಸಿದರು. ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಬಾಪೂಜಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ; ವಿಜೇತರಿಗೆ ಪ್ರಮಾಣ ಪತ್ರ, ನಗದು ಪುರಸ್ಕಾರ ವಿತರಣೆ: ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕುಂದಗೋಳ ಪಟ್ಟಣದ ಎಸ್.ಎಸ್.ಬಾಲಿಕಾ ಪ್ರೌಢಶಾಲಾ ವಿದ್ಯಾರ್ಥಿನಿ ಪವಿತ್ರಾ ಹೂಗಾರ, ದ್ವಿತೀಯ ಸ್ಥಾನವನ್ನು ಅಂಚಟಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗರತ್ನ ಹಳೆಮನಿ ಮತ್ತು ತೃತೀಯ ಸ್ಥಾನವನ್ನು ಕಲಘಟಗಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ದಾನೇಶ್ವರ ಹುಬ್ಬಳ್ಳಿ ಅವರು ಪಡೆದಿದ್ದರು.


ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಲವಡಿ ಎಸ್.ಕೆ.ಟಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಭಿμÉೀಕ ಎ. ಅಡಾಡಿ, ದ್ವಿತೀಯ ಸ್ಥಾನವನ್ನು ಹುಬ್ಬಳ್ಳಿ ವಿದ್ಯಾನಗರದ ಜಿ.ಜಿ.ಕಾಲೇಜು ಆಫ್ ಕಾಮರ್ಸ್‍ನ ವಿದ್ಯಾರ್ಥಿನಿ ಶ್ರೇಯಾ ರಾಯಚೂರ ಮತ್ತು ತೃತೀಯ ಸ್ಥಾನವನ್ನು ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿನ ಸ.ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಭೂಮಿಕಾ ಅಂಗಡಿ ಅವರು ಪಡೆದುಕೊಂಡರು.


ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಕಲಘಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯ ಬಮ್ಮಿಗಟ್ಟಿ, ದ್ವಿತೀಯ ಸ್ಥಾನವನ್ನು ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ.ಬಿ. ಮತ್ತು ತೃತೀಯ ಸ್ಥಾನವನ್ನು ಧಾರವಾಡ ಎಸ್.ಸಿ.ಎಂ.ಎಸ್. ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿರಾಜ ನೇಸರೇಕರ ಅವರು ಪಡೆದಿದ್ದಾರೆ. ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.


ಕಾರ್ಯಕ್ರಮದಲ್ಲಿ ಬಾಲಬಳಗ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಚರಕದಿಂದ ಹತ್ತಿಯ ನೂಲು ತಗೆಯುವ ಕಾರ್ಯಮಾಡಿದ್ದು ಸಾರ್ವಜನಿಕರ ಗಮನ ಸೆಳೆಯಿತು. ಕಾರ್ಯಕ್ರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗಾಂಧಿವಾದಿಗಳು ಹಾಗೂ ಗಾಂಧಿ ಅನುಯಾಯಿಗಳು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.