ಮಹಿಳಾ ವಿವಿ ನೂತನ ಹಂಗಾಮಿ ಕುಲಪತಿಯಾಗಿ ಪ್ರೊ. ಮಲ್ಲಿಕಾರ್ಜುನ ಎನ್.ಎಲ್. ನೇಮಕ

ವಿಜಯಪುರ,ಜೂ.28: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ನಿಕಾಯದ ಡೀನ್ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯೂ ಆಗಿರುವ ಥಾವರಚಂದ ಗೆÀಹಲೋಟ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಹಂಗಾಮಿ ಕುಲಪತಿಯಾಗಿದ್ದ ಪ್ರೊ.. ಶಾಂತಾದೇವಿ ಟಿ ಅವರ ಡೀನ್ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ- 2000ನ ಸೆಕ್ಷನ್ 16 (2) ರ ಅನ್ವಯ ಪ್ರದತ್ತವಾದ ಅಧಿಕಾರ ಬಳಸಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರ ಅವಧಿ 27-6-2025ರ ಮಧ್ಯಾಹ್ನದಿಂದ 30-06-2025ರ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರ ಹಸ್ತಾಂತರ:
ರಾಜ್ಯಪಾಲರ ಆದೇಶದಂತೆ ನೂತನ ಹಂಗಾಮಿ ಕುಲಪತಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಇಂದು ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪ್ರೊ.. ಶಾಂತಾದೇವಿ ಟಿ ಮತ್ತು ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ್, ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು ಎಂದು ವಿವಿ ಪ್ರಕಟಣೆ ತಿಳಿಸಿದೆ.