
ಬೀದರ್:ನ.5: ದಕ್ಷಿಣ ಕ್ಷೇತ್ರದ ಅಮಲಾಪುರ ಗ್ರಾಮಪಂಚಾಯಿತಿ ಇದೀಗ ಗ್ರಾಮಪಂಚಾಯಿತಿಯಿಂದ ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡು ಹಲವು ತಿಂಗಳು ಕಳೆದರೂ ಯಾವುದೇ ಮೂಲ ಸೌಕರ್ಯ ಇನ್ನೂ ದೊರೆತಿಲ್ಲ ಎಂಬ ಗ್ರಾಮಸ್ಥರ ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಜನರ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ
ಜನರ ಹಿತಕ್ಕಾಗಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಾನು ಸದಾ ದುಡಿಯುತ್ತೇನೆ. ಅಭಿವೃದ್ಧಿಯ ಕೆಲಸಗಳ ಮೂಲಕ ಜನರ ವಿಶ್ವಾಸವನ್ನು ಉಳಿಸಿಕೊಳ್ಳುವುದು ನನ್ನ ಕರ್ತವ್ಯ ಮಹಾನಗರ ಪಾಲಿಕೆಗೆ ಸೇರಿದ ಗ್ರಾಮಗಳಿಗೆ ಅನುದಾನ ಇನ್ನೂ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ಗ್ರಾಮದ ಜನರು ಸಮಸ್ಯೆ ಎದುರಿಸುವಂತಾಗಿದೆ ಇಗಾಗಲೇ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಶೀಘ್ರ ಹಣ ಬಿಡುಗಡೆ ಆದರೆ ಹೆಚ್ಚಿನ ಮೂಲ ಸೌಲಭ್ಯ ಒದಗಿಸಲಾಗುವುದು ಸಧ್ಯಕ್ಕೆ ತುರ್ತಾಗಿ ಪ್ರಮುಖ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಮಟ್ಟದಲ್ಲಿ ರಸ್ತೆ, ನೀರು, ವಿದ್ಯುತ್ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸರ್ಕಾರದ ಅನುದಾನವನ್ನು ಪ್ರಾಮಾಣಿಕವಾಗಿ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.
ಅಭಿವೃದ್ಧಿ ಎಂದರೆ ಕೇವಲ ಕಾಮಗಾರಿಗಳು ಅಲ್ಲ, ಜನರ ಜೀವನ ಮಟ್ಟವನ್ನು ಮೇಲಕ್ಕೆತ್ತುವುದು. ಅದಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಸರ್ಕಾರಿ ಪ್ರೌಢಶಾಲೆಗೆ ಭೇಟಿ ಪರಿಶೀಲನೆ.
ಶಾಲೆಗೆ ಭೇಟಿ ನೀಡಿದ ಶಾಸಕರು ಅಡುಗೆ ಕೋಣೆಗೆ ತೆರಳಿ ಬಿಸಿಯೂಟ ತಯಾರಿಕೆಯನ್ನು ವೀಕ್ಷಿಸಿ
ದರು. ರುಚಿ ಹಾಗೂ ಶುಚಿಯನ್ನು ಕಾಯ್ದುಗೊಳ್ಳುವುದರ ಜತೆಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು ಬಳಿಕ ವಿಧ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.
ಬಳಿಕ ತರಗತಿ ಕೊಠಡಿಗೆ ತೆರಳಿ ಕಲಿಕೆಯ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದು ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವಂತೆ ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ನಿರ್ದಿಷ್ಟ ಗುರಿಯನ್ನು ಹೊಂದಿ ಓದಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು. ಶಾಲೆಗೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ಶಿಥಿಲಾವಸ್ಥೆಯಿಂದ ಕೂಡಿರುವ ಕಟ್ಟಡವನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಕಟ್ಟಡ ನಿರ್ಮಿಸಿ ಕೊಡುವುದಾಗಿ ಶಿಕ್ಷಕರಿಗೆ ಭರವಸೆ ನೀಡಿದರು. ಇದೇ ವೇಳೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿ ಮಹಾದೇವ, ಮುಖಂಡರಾದ ಗುರುನಾಥ ರಾಜಗೀರ, ಜಗನಾಥ್ ಪಾಟೀಲ, ಚಂದ್ರಯ್ಯ ಸ್ವಾಮಿ, ರಾಮಲು, ವೀರಶೆಟ್ಟಿ, ಸಚೀನ್ ಕೋಣಿ ಗ್ರಾಮದ ಮುಖಂಡರ ಬಸವರಾಜ ಶೇರಿಕರ, ಶಿವಶಂಕರ ಬಕ್ಕಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.





























