
ಬೀದರ:ಜ.20:ನಗರದ ಶ್ರೀ ಮಡಿವಾಳೇಶ್ವರ ಶಾಲೆಯಲ್ಲಿ ಮಾತೃಭಾರತಿಯ ವತಿಯಿಂದ ಮಕರ ಸಂಕ್ರಾಂತಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹ ಶಿಕ್ಷಕಿ ಶ್ರೀಮತಿ ಜ್ಯೋತಿ ಪಾಟೀಲ್ ಅವರು, ಭಾರತೀಯ ಸಮಾಜದಲ್ಲಿ ಹಬ್ಬಗಳ ಮಹತ್ವ ಹಾಗೂ ಅವುಗಳ ಸಾಮಾಜಿಕ, ಧಾರ್ಮಿಕ ಮತ್ತು ಪೌರಾಣಿಕ ಹಿನ್ನೆಲೆಯನ್ನು ವಿವರಿಸಿದರು. ಸೂರ್ಯನ ಪಥ ಬದಲಾವಣೆ, ಭೀಷ್ಮರ ಇಚ್ಛಾಮರಣ, ಮಣಿಕಂಠ ಹುಲಿ-ಹಾಲಿನ ಕಥೆ, ಗಂಗೆ ಭೂಮಿಗೆ ಅವತರಿಸಿದ ಪ್ರಸಂಗ, ದಿಲೀಪನ ಕಥೆ ಸೇರಿದಂತೆ ಎಳ್ಳು-ಬೆಲ್ಲದ ಮಹತ್ವ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅರ್ಚನಾ ಶಿರಗಿರೆ ಅವರು, ಭಾರತೀಯ ಪರಂಪರೆಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನವಿದ್ದು, ಅವುಗಳ ಅರ್ಥ ಮತ್ತು ಹಿನ್ನೆಲೆಯನ್ನು ಅರಿತು ಆಚರಿಸುವುದು ಅಗತ್ಯವೆಂದು ಹೇಳಿದರು. ಕೇವಲ ಆಚರಣೆಗೆ ಸೀಮಿತಗೊಳಿಸದೆ, ಮುಂದಿನ ಪೀಳಿಗೆಗೆ ಪ್ರೇರಣೆಯಾಗುವಂತೆ ನಮ್ಮ ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕಾಗಿದೆ. ಪಾಶ್ಚಾತ್ಯ ಸಂಸ್ಕೃತಿಯ ಅಂಧಾನುಕರಣೆಯಿಂದ ನಮ್ಮ ಪರಂಪರೆ ಹಾನಿಯಾಗುತ್ತಿದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಶ್ರೀದೇವಿ ಅವರು ಸುಸೂತ್ರವಾಗಿ ನಿರೂಪಿಸಿದರು. ಸಮೃದ್ಧಿ ಸತೀಶ್ ಕುಮಾರ್ ಅವರು ಭಕ್ತಿಗೀತೆ ಹಾಡಿದರು. ಶ್ರೀಮತಿ ರೇμÁ್ಮ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಎಲ್ಲರೂ ಪರಸ್ಪರ ಎಳ್ಳು-ಬೆಲ್ಲ ಹಂಚಿಕೊಂಡು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.
























