ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ,ಸೆ.2-ನೇಣು ಹಾಕಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮೊಮಿನಪೂರದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಹಮ್ಮದ್ ಶೇಖ್ ಒಸ್ಮಾನ್ ತಂದೆ ಶೇಖ್ ಜುಲ್ಫಿಕರ್ ಆತ್ಮಹತ್ಯೆ ಮಾಡಿಕೊಂಡವರು.
ಮೃತ ಮಹಮ್ಮದ್ ಶೇಖ್ ಒಸ್ಮಾನ್, ಸರಾಫ್ ಬಜಾರ್‍ದಲ್ಲಿರುವ ಶೇಖ್ ರಬೀವುಲ್ ಅವರ ಬಂಗಾರದ ಅಂಗಡಿಯಲ್ಲಿ ಕಳೆದ ಮೂರು ವರ್ಷಗಳಿಂದ ಸೊನಾರ ಕೆಲಸ ಮಾಡುತ್ತಿದ್ದ ಮತ್ತು ಅವರ ಮನೆಯಲ್ಲಿಯೇ ವಾಸಿಸುತ್ತಿದ್ದು, ಮನೆಯ ಹಾಲ್‍ನಲ್ಲಿರುವ ಛತ್ತಿನ ಕೊಂಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಶೇಖ್ ರಬೀವುಲ್ ಅವರು ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆ ನಡೆದಿದೆ.