Home ಕ್ರೈಂ ಸುದ್ದಿಗಳು ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಜಮಖಂಡಿ : ಮೇ 16:ನಗರದ ದಾನಮ್ಮ ಗುಡಿ ಹತ್ತಿರ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಸುಮಾರು 40 ವರ್ಷದ ಭಗವಾನ್ ಪ್ರಕಾಶ್ ತೇಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದ ವೇಳೆ ಅವರ ಪತ್ನಿ ಪೂಜಾ ಗಮನಿಸಿ ತಕ್ಷಣ ಚಿಕಿತ್ಸೆಗೆ ಜಮಖಂಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಭಗವಾನ್ ಪ್ರಕಾಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಜಮಖಂಡಿ ಶಹರ ಠಾಣೆಯ ಎಎಸ್‍ಐ ಎಸ್.ಎಸ್. ಆದರಗಿ ಹಾಗೂ ಪೆÇಲೀಸ್ ಸಿಬ್ಬಂದಿಗಳಾದ ಐ.ಜಿ. ದಾಶ್ಯಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಜಮಖಂಡಿ ಶಹರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.