Home ಕ್ರೈಂ ಸುದ್ದಿಗಳು ಭಜಂತ್ರಿ ಗಲ್ಲಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಭಜಂತ್ರಿ ಗಲ್ಲಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಜಮಖಂಡಿ:ಮಾ.17: ನಗರದ ಭಜಂತ್ರಿ ಗಲ್ಲಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಸುಮಾರು 35 ವರ್ಷದ ಪರಶುರಾಮ ಪಾಂಡುರಂಗ ಕಾಂಬಳೆ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೆÇಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಜಮಖಂಡಿ ಪಿಎಸ್‍ಐ ಅನೀಲ ಕುಂಬಾರ ಹಾಗೂ ಪೆÇಲೀಸ್ ಸಿಬ್ಬಂದಿಗಳಾದ ಮಲ್ಲು ಕೊಲಾರ, ಶಂಕರ ಆಸಂಗಿ, ಭೀಮು ವಾಲೆಕಾರ, ಬಸವರಾಜ ಕರಾಬೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಶವಪರೀಕ್ಷೆಗಾಗಿ ಜಮಖಂಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಜಮಖಂಡಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.