
ಜಮಖಂಡಿ:ಮಾ.18:ತಾಲೂಕಿನ ಟಕ್ಕೋಡ ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ವ್ಯಕ್ತಿಯೋರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತರನ್ನು ಸುಮಾರು 35 ವರ್ಷದ ಅನೀಲ ಕಾಂಬಳೆ ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಸಾವಳಗಿ ಪೆÇಲೀಸ್ ಠಾಣೆಯ ಪಿ.ಎಸ್.ಐ ಅಪ್ಪು ಐಗಳಿ ನೇತೃತ್ವದ ಪೆÇಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು, ಆತ್ಮಹತ್ಯೆಗೆ ಕಾರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಘಟನೆ ಸಾವಳಗಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ನಿಖರವಾದ ಮಾಹಿತಿ ಪೆÇಲೀಸ್ ಮೂಲಗಳಿಂದ ತಿಳಿದು ಬರಬೇಕಾಗಿದೆ.



























