ಮದ್ಯದ ಅಮಲಿನಲ್ಲಿ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ,ಸೆ.5-ಮದ್ಯಪಾನ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿಯೊಬ್ಬ ಅಮಲಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರಾಮತೀರ್ಥ ನಗರದಲ್ಲಿ ನಡೆದಿದೆ.
ರವಿಕಾಂತ ತಂದೆ ರೇವಣಸಿದ್ದಪ್ಪ ಪಾಟೀಲ (45) ಆತ್ಮಹತ್ಯೆ ಮಾಡಿಕೊಂಡವರು.
ಜೆಸಿಬಿ ಶೋರೂಮದಲ್ಲಿ ಸೇಲ್ಸ್‍ಮ್ಯಾನ್ ಕೆಲಸ ಮಾಡುತ್ತಿದ್ದ ರವಿಕಾಂತ ಅವರು ಮದ್ಯಪಾನ ಚಟಕ್ಕೆ ಅಂಟಿಕೊಂಡಿದ್ದರು. ಸೆ. 3 ರಂದು ರಾತ್ರಿ ಮನೆಯಲ್ಲಿ ಫ್ಯಾನಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ರೂಪಾ ಪಾಟೀಲ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ಸಬ್-ಸರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.