Home ಕ್ರೈಂ ಸುದ್ದಿಗಳು ಟ್ರಾನ್ಸ್‍ಫಾರ್ಮರ್(ಟಿಸಿ) ತಗುಲಿ ವ್ಯಕ್ತಿ ಸಾವು – ಕೆಇಬಿ ನಿರ್ಲಕ್ಷ್ಯಕ್ಕೆ ಆಕ್ರೋಶ

ಟ್ರಾನ್ಸ್‍ಫಾರ್ಮರ್(ಟಿಸಿ) ತಗುಲಿ ವ್ಯಕ್ತಿ ಸಾವು – ಕೆಇಬಿ ನಿರ್ಲಕ್ಷ್ಯಕ್ಕೆ ಆಕ್ರೋಶ

ಜಮಖಂಡಿ, ಮೇ 4: ಜಮಖಂಡಿ ತಾಲೂಕಿನ ಗಣಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್‍ಫಾರ್ಮರ್‍ಗೆ(ಟಿಸಿ) ತಗುಲಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೊಣ್ಣೂರ ಗ್ರಾಮದ ಸಿದ್ದಪ್ಪ ಶ್ರೀಶೈಲ ದಡ್ಡಿ ಎಂದು ಗುರುತಿಸಲಾಗಿದೆ.

ಸಿದ್ದಪ್ಪ ಅವರು ಯಾವುದೋ ಕೆಲಸದ ನಿಮಿತ್ತ ಗಣಿ ಗ್ರಾಮಕ್ಕೆ ತೆರಳಿದ್ದ ವೇಳೆ, ಗ್ರಾಮದ ಮುಖ್ಯರಸ್ತೆ ಪಕ್ಕದಲ್ಲಿದ್ದ ಟ್ರಾನ್ಸ್‍ಫಾರ್ಮರ್‍ಗೆ ಅಜಾಗರೂಕತೆಯಿಂದ ತಗುಲಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿ ಕೊಣ್ಣೂರ ಗ್ರಾಮದ ಪ್ರಮುಖ ಗದಗೆಪ್ಪ ಧಾರವಾಡ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಗ್ರಾಮದ ಹೊಸ ಮೇನ್‍ರೋಡ್ ಪಕ್ಕದಲ್ಲೇ ನಿಯಮಬಾಹಿರವಾಗಿ ಟ್ರಾನ್ಸ್‍ಫಾರ್ಮರ್ ಅಳವಡಿಸಲಾಗಿದೆ. ಕೆಇಬಿ ಇಲಾಖೆಯ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ,” ಎಂದು ಆರೋಪಿಸಿದರು.
ಇನ್ನೂ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ?50 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು. ಇಲ್ಲವಾದಲ್ಲಿ ಮೇಲಾಧಿಕಾರಿಗಳಿಗೆ ದೂರು ನೀಡಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಘಟನೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.