
ಕಲಬುರಗಿ,ಏ.3: ವ್ಯಕ್ತಿಯೊಬ್ಬನಿಗೆ ಅಪರಿಚಿತನೊಬ್ಬ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿದ ಘಟನೆ ಗುರುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. ಯಡ್ರಾಮಿ ಪಟ್ಟಣದ ಹಣಮಂತ ಪೂಜಾರಿ ( 35) ಇರಿತಕ್ಕೊಳಗಾದ ವ್ಯಕ್ತಿ. ಚಾಕು ಇರಿತದಿಂದ ಗಂಭೀರ ಗಾಯಗೊಂಡ ಹಣಮಂತ ಪೂಜಾರಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಕು ಇರಿತಕ್ಕೆ ಕಾರಣ ತಿಳಿದು ಬಂದಿಲ್ಲ. ಅಪರಿಚಿತ ದುಷ್ಕರ್ಮಿಯ ಪತ್ತೆಗೆ ಶೋಧ ನಡೆದಿದ್ದು,ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




















