
ಜಮಖಂಡಿ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಗಲಗಲಿ ಸಮೀಪದ ಕೃಷ್ಣಾ ನದಿ ಹಿನ್ನೀರಿನಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಜಮಖಂಡಿ ನಗರದ ಸುವರ್ಣಾ ಚಿತ್ರಮಂದಿರದ ಸಮೀಪದ ನಿವಾಸಿ ಸಿದ್ದಪ್ಪ ಭೀಮಪ್ಪ ಯಮಗಾರ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪೆÇಲೀಸ್ ದೂರಿನ ಪ್ರಕಾರ, ಅ.2ರಂದು ಮಧ್ಯಾಹ್ನ 12.20ರಿಂದ ಅ.5ರಂದು ಸಂಜೆ 4 ಗಂಟೆಯ ನಡುವಿನ ಅವಧಿಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದಪ್ಪ ಅವರನ್ನು ಯಾವುದೋ ವಸ್ತುವಿನಿಂದ ಹೊಡೆದು ಕೊಲೆ ಮಾಡಿ, ಮೃತದೇಹವನ್ನು ಗಲಗಲಿ ಕೃಷ್ಣಾ ನದಿ ಹಿನ್ನೀರಿನಲ್ಲಿ ಎಸೆದಿರುವ ಆರೋಪ ಕೇಳಿಬಂದಿದೆ.
ಈ ಪ್ರಕರಣದಲ್ಲಿ ಪತ್ನಿ, ಸ್ವಂತ ಮಕ್ಕಳು ಸೇರಿದಂತೆ ಕುಟುಂಬಸ್ಥರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದ್ದು, ಪೆÇಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಗಳ ಸತ್ಯಾಸತ್ಯತೆ ಪೆÇಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ.























