Home ಕ್ರೈಂ ಸುದ್ದಿಗಳು ಐದು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಬಿರನಕಲ್ ತಾಂಡದಲ್ಲಿ ದುರ್ಘಟನೆ

ಐದು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಬಿರನಕಲ್ ತಾಂಡದಲ್ಲಿ ದುರ್ಘಟನೆ

ಯಾದಗಿರಿ:ಮಾ.6:ಜಿಲ್ಲೆಯ ವಡಗೇರಾ ತಾಲೂಕಿನ ಬಿರನಕಲ್ ತಾಂಡ ಗ್ರಾಮದ ಕ್ಯಾಂಪ್ ರಸ್ತೆಯ ಸಮೀಪ ಐದು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿರುವ ದುರ್ಘಟನೆ ಜಿಲ್ಲೆಯಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ.

ಮೃತ ವ್ಯಕ್ತಿಯನ್ನು ಧರ್ಮನಾಯಕ್ ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಇಂದು ಬೆಳಗಿನ ಜಾವ ಸ್ಥಳೀಯರು ಕ್ಯಾಂಪ್ ರಸ್ತೆಯ ಸಮೀಪದ ಪ್ರದೇಶದಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಶವ ಬಿದ್ದಿರುವುದನ್ನು ಗಮನಿಸಿ ತಕ್ಷಣವೇ ವಡಗೇರಾ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿ ಶವವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಪೆÇಲೀಸರು ಸ್ಥಳ ಪರಿಶೀಲನೆ ನಡೆಸಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಆರಂಭಿಸಿದ್ದು, ಘಟನೆಯ ಹಿನ್ನೆಲೆ ಹಾಗೂ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಗಮನಾರ್ಹ ಸಂಗತಿಯೆಂದರೆ, ಐದು ದಿನಗಳ ಹಿಂದೆ ಧರ್ಮನಾಯಕ್ ಅವರು ಕಾಣೆಯಾಗಿರುವ ಕುರಿತು ಅವರ ಪತ್ನಿ ಲಲಿತಾ ಅವರು ವಡಗೇರಾ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಗಂಡ ಮನೆಗೆ ಮರಳಿ ಬರುತ್ತಾನೆ ಎಂಬ ಅಪಾರ ನಿರೀಕ್ಷೆಯಲ್ಲಿ ದಿನಗಳನ್ನು ಕಳೆಯುತ್ತಿದ್ದ ಪತ್ನಿ ಹಾಗೂ ಕುಟುಂಬಸ್ಥರಿಗೆ ಇಂದು ಶವ ಪತ್ತೆಯಾದ ದುಃಖದ ಸುದ್ದಿ ತಿಳಿದು ಮನಕಲುಕುವ ಶೋಕ ವಾತಾವರಣ ನಿರ್ಮಾಣವಾಗಿದೆ.

ಈ ಘಟನೆ ಗ್ರಾಮಸ್ಥರಲ್ಲಿ ಆತಂಕವನ್ನು ಉಂಟುಮಾಡಿದ್ದು, ಸಾವಿನ ಹಿಂದೆ ಯಾವುದೇ ಅನುಮಾನಾಸ್ಪದ ಅಂಶಗಳಿವೆಯೇ ಎಂಬ ದಿಸೆಯಲ್ಲಿ ಪೆÇಲೀಸರು ಸಮಗ್ರ ತನಿಖೆ ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತನಿಖೆ ಬಳಿಕವೇ ಸ್ಪಷ್ಟವಾಗಲಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.