ಮಾಣಿಕಮ್ಮ ಜಮಾದಾರಗೆ ರಾಜ್ಯ ಯುವ ಪ್ರಶಸ್ತಿ

ಕಲಬುರಗಿ:ಅ.26:ಬೆಂಗಳೂರು ನಗರದ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಯುವ ಸಮ್ಮೇಳನದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕಲಬುರಗಿ ಜಿಲ್ಲೆಯ ಮಾಣಿಕಮ್ಮ ಜಮಾದಾರ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ರಾಜ್ಯ ಯುವ ಪ್ರಶಸ್ತಿ ನೀಡಿ ಗೌರವಿಸಿದರು ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಣೀಂದ್ರ ಪ್ರಸಾದ್ ಒಕ್ಕೂಟದ ಗೌರವ ಅಧ್ಯಕ್ಷ ವಿಜಯಕುಮಾರ್ ಸೋನಾರೆ ರಾಜ್ಯಧ್ಯಕ್ಷ ಶಿವಕುಮಾರ್ ಪ್ರಕಾಶ ಎಸ್ ಅಂಗಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.