
ಬೀದರ್: ಮಾ.6: 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್‍ನಲ್ಲಿ ಬೀದರ ಜಿಲ್ಲೆಗೆ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ. ನಗರಾಭಿವೃದ್ಧಿ, ಪಶುಸಂಗೋಪನೆ, ಆರೋಗ್ಯ ಹಾಗೂ ನೀರಾವರಿ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ.
ಬಜೆಟ್‍ನಲ್ಲಿ ಬೀದರ ಪಶುವೈದ್ಯಕೀಯ ಕಾಲೇಜಿನಲ್ಲಿ ಪಶುಗಳ ರೋಗ ಪತ್ತೆಗಾಗಿ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಜೊತೆಗೆ ಅಲೆಮಾರಿ ನಾಯಿಗಳ ನಿಯಂತ್ರಣಕ್ಕಾಗಿ ಡಾಗ್ ಬರ್ಥ್ ಕಂಟ್ರೋಲ್ ತರಬೇತಿ ಕೇಂದ್ರವನ್ನು ಬೀದರದಲ್ಲಿ ಆರಂಭಿಸಲು ಯೋಜನೆ ರೂಪಿಸಲಾಗಿದೆ.
ನಗರಾಭಿವೃದ್ಧಿ ದೃಷ್ಟಿಯಿಂದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ ಬೀದರ ಮಹಾನಗರ ಪಾಲಿಕೆಗೆ ?200 ಕೋಟಿ ಅನುದಾನ ನೀಡಲಾಗುತ್ತದೆ. ಈ ಅನುದಾನದಿಂದ ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಧಾರ್ಮಿಕ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲಿಯೂ ಗಮನ ಹರಿಸಲಾಗಿದ್ದು, ಬೀದರದ ನಾನಕ್ ಝೀರಾ ಸಾಹಿಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡುವುದಾಗಿ ಬಜೆಟ್‍ನಲ್ಲಿ ತಿಳಿಸಲಾಗಿದೆ.
ಕಾರ್ಮಿಕರ ಆರೋಗ್ಯ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಬೀದರದಲ್ಲಿರುವ ಇSI ಆಸ್ಪತ್ರೆ ಮತ್ತು ಡಿಸ್ಪೆನ್ಸರಿಯನ್ನು ಸುಧಾರಣೆ (ಅಪ್‍ಗ್ರೇಡ್) ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಇದೇ ವೇಳೆ ಜಿಲ್ಲೆಯಲ್ಲಿ ನೀರಾವರಿ ಮತ್ತು ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ. ಹುಮನಾಬಾದ್, ಭಾಲ್ಕಿ ಮತ್ತು ಚಿಟಗುಪ್ಪ ತಾಲ್ಲೂಕುಗಳಲ್ಲಿ ಕೆರೆ ಅಭಿವೃದ್ಧಿ, ಚೆಕ್ ಡ್ಯಾಂ ನಿರ್ಮಾಣ, ಕಾಲುವೆ ಸುಧಾರಣೆ ಸೇರಿದಂತೆ ವಿವಿಧ ಸಣ್ಣ ನೀರಾವರಿ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ.
ಒಟ್ಟಿನಲ್ಲಿ ಈ ಬಜೆಟ್‍ನಲ್ಲಿ ಬೀದರ ಜಿಲ್ಲೆಗೆ ನಗರಾಭಿವೃದ್ಧಿ, ಆರೋಗ್ಯ, ಪಶುಸಂಗೋಪನೆ ಮತ್ತು ನೀರಾವರಿ ಕ್ಷೇತ್ರಗಳಲ್ಲಿ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಲಾಗಿದೆ.




















