ಚಿತ್ತಾಪುರದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ

ಚಿತ್ತಾಪುರ;ಅ.16: ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕುಟುಂಬಸ್ಥರಿಗೆ ಅವಾಚ್ಯವಾಗಿ, ಅಶ್ಲೀಲ ಪದಗಳಿಂದ ವೈಯಕ್ತಿಕವಾಗಿ ನಿಂದಿಸಿದ ಘಟನೆ ಖಂಡಿಸಿ ಚಿತ್ತಾಪುರ ಪಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಗ್ಗೆಯಿಂದಲೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಲಾಡ್ಜಿಂಗ್ ಕ್ರಾಸ್, ಚಿತ್ತಾವಲಿ ವೃತ್ತ, ಜನತಾ ಚೌಕ್, ನಾಗಾವಿ ವೃತ್ತದಲ್ಲಿ ಕಾರ್ಯಕರ್ತರು ಜಮಾವಣೆಗೊಂಡು ಆರ್.ಎಸ್.ಎಸ್ ಬ್ಯಾನ್ ಮಾಡಬೇಕೆಂದು ಧಿಕ್ಕಾರ ಕೂಗಿದರು.
ವ್ಯಾಪಾರಸ್ಥರು, ಹೊಟೇಲ್ ಮಾಲೀಕರು, ಬಟ್ಟೆ ವ್ಯಾಪಾರಿಗಳು ಸೇರಿದಂತೆ ಇನ್ನಿತರರು ತಮ್ಮ ತಮ್ಮ ಅಂಗಡಿ-ಮುಂಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಬಸ್’ಗಳಿಲ್ಲದೇ ಬಿಕೋ ಎನ್ನುತ್ತಿತ್ತು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿದಂತೆ ಇತರರು ಇದ್ದರು.