Home ಜಿಲ್ಲೆ ಕಲಬುರಗಿ ನಾಳೆ ಕಲಬುರಗಿಯಲ್ಲಿ ಇಂಡಿಯಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ನಾಳೆ ಕಲಬುರಗಿಯಲ್ಲಿ ಇಂಡಿಯಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಕಲಬುರಗಿ,ಅ.12-ಎಸ್‍ಐಆರ್ ಪ್ರಕ್ರಿಯೇ ದೊಷಪೂರಿತವಾಗಿದ್ದು ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಇದನ್ನು ರದ್ದುಪಡಿಸಬೇಕು ಹಾಗೂ ಅಕ್ರಮ ಎಸಗಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ರಾಜಿನಾಮೆಗೆ ಆಗ್ರಹಿಸಿ ಪ್ರಜಾಪ್ರಭುತ್ವದ ಉಳಿವಿಗಾಗಿ ಇಂಡಿಯಾ ಒಕ್ಕೂಟದಿಂದ ಅ.13 ರಂದು ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕಿರಣ್ ದೇಶಮುಖ ತಿಳಿಸಿದ್ದಾರೆ.
ಈ ಪ್ರತಿಭಟನೆಯು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಿಂದ ಜಗತ್ ವೃತ್ತದವರೆಗೆ ಹೊರಡಲಿದೆ. ಕಾರಣ ಅಂದು ಬೆಳಿಗ್ಗೆ 10-30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ
ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.