
ಚಿತ್ತಾಪುರ; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉತ್ತರಾಖಂಡದ ಹಲದ್ವಾನಿಯ ರಾಮಲೀಲಾ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ಬಿಜೆಪಿ, ಆರ್’ಎಸ್’ಎಸ್ ಸಂಘ ಪರಿವಾರದಿಂದ ರಾಮಲೀಲಾ ಮೈದಾನ ಶುದ್ಧೀಕರಣ ಮಾಡಿದನ್ನು ಖಂಡಿಸಿ ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಹಾಗೂ ವಾಡಿ ಬ್ಲಾಕ್ ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಇದೇ ವೆಳೆ ಪಟ್ಟಣದ ಲಾಡ್ಜಿಂಗ್ ಕ್ರಾಸ್’ನಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಎರಡು ಗಂಟೆಗೂ ಹೆಚ್ಚು ಕಾಲ ಬಿಜೆಪಿ ಹಾಗೂ ಆರ್’ಎಸ್’ಎಸ್ ಸಂಘ ಪರಿವಾರದವರ ವಿರುದ್ಧ ಘೋಷಣೆಗಳನ್ನು ಕೂಗಿದವರು.
ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ವಾಡಿ ಬ್ಲಾಕ್ ಅಧ್ಯಕ್ಷ ಮಹೇಮೂದ್ ಸಾಹೇಬ್ ಅವರು ಮಾತನಾಡಿ, ರಾಮಲೀಲಾ ಮೈದಾನವು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಂದಾಗಿ ಕಲುಷಿತಗೊಂಡಿದೆ ಎಂದು ಸದರಿ ಮೈದಾನದಲ್ಲಿ ಗಂಗಾಜಲದಿAದ ಶುದ್ದೀಕರಣ ಕಾರ್ಯಕ್ರಮ ಮಾಡಿ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಶುದ್ದೀಕರಣ ಪ್ರಕರಣವು ಕೇವಲ ಒಬ್ಬ ದಲಿತ ನಾಯಕನಿಗೆ ಮಾಡಿರುವ ಅವಮಾನವಲ್ಲ ದೇಶದ ಇಡೀ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಇದನ್ನು ಚಿತ್ತಾಪುರ ಮತ್ತು ವಾಡಿ ಬ್ಲಾಕ್ ಕಾಂಗ್ರೆಸ್ ಪಕ್ಷವು ಬಲವಾಗಿ ಖಂಡಿಸುತ್ತದೆ ಮತ್ತು ವಿರೋಧಿಸುತ್ತದೆ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಮರಗೋಳ ಮಾತನಾಡಿ, ದಲಿತ ಸಮದಾಯದ ಮಹಾನ್ ನಾಯಕ, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ, ಸಿದ್ಧಾಂತಗಳಲ್ಲಿ ನಂಬಿಕೆಯಿಟ್ಟು ನಿತ್ಯ ಜೀವನದಲ್ಲಿ ಪಾಲಿಸುತ್ತಾ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನಾತ್ಮಕ ಹಕ್ಕುಗಳಿಗಾಗಿ ಹಗಲಿರುಳು ಹೋರಾಡುತ್ತಿರುವ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದ್ದು ಮತ್ತು ಅಸ್ಪೃಶ್ಯತೆ ಆಚರಣೆ ಮಾಡಿದ್ದು ದೇಶದ ನಾಗರಿಕ ಸಮಾಜವು ಅಂತರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಮಾಡಿದೆ. ಕೇಂದ್ರ ಸರ್ಕಾರ ಸದರಿ ಶುದ್ದೀಕರಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಸುರೇಶ್ ಮೆಂಗನ್, ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ದೇಶದ ಸಂವಿಧಾನದ ಅನುಚ್ಚೇಧ ೧೭ರ ಪ್ರಕಾರ ದೇಶದಲ್ಲಿ ಅಸ್ಪೃಶ್ಯತೆ ಆಚರಣೆಯು ಸಂಪೂರ್ಣ ನಿಷೇಧವಿದೆ. ಹೀಗಿದ್ದಾಗಲೂ ಜಾತಿವಾದಿ, ಮನುವಾದಿ ಜನರು ಶುದ್ದೀಕರಣ ಕಾರ್ಯಕ್ರಮ ಮಾಡುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ನಾಗರೀಕ ಸಮಾಜವು ತಲೆತಗ್ಗಿಸುವಂತಹ ಘಟನೆಯಿದು. ಶುದ್ದೀಕರಣ ಪ್ರಕರಣವು ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ-೧೯೫೫ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ- ೧೯೮೯ರ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮತ್ತು ಸಂವಿಧಾನ ಉಲ್ಲಂಘನೆ ಆರೋಪದಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮುಕ್ತಾರ್ ಪಟೇಲ್ ಮಾತನಾಡಿ, ದಲಿತ, ಹಿಂದುಳಿದ ನಾಯಕರನ್ನು ಅವಮಾನಿಸುವ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸಂವಿಧಾನ ಉಲ್ಲಂಘಿಸಿ ಅಸ್ಪೃಶ್ಯತೆ ಆಚರಣೆ ಜೀವಂತವಾಗಿಡುವ ಶುದ್ದೀಕರಣ ಕಾರ್ಯಕ್ರಮ ದೇಶಾದ್ಯಂತ ಸಂಪೂರ್ಣ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಚಂದು ಜಾಧವ, ರಮೇಶ್ ಹಡಪದ ಕೊಲ್ಲೂರು, ನಾಗರೆಡ್ಡಿ ಪಾಟೀಲ ಕರದಾಳ, ಶಿವಾನಂದ ಪಾಟೀಲ, ಶ್ರೀನಿವಾಸ ಸಗರ, ಬಸವರಾಜ ಹೊಸಳ್ಳಿ, ಬಸವರಾಜ ಚಿನ್ನಮಳ್ಳಿ, ನಾಗಯ್ಯ ಗುತ್ತೇದಾರ, ಶ್ರೀನಿವಾಸ ಸಗರ, ಶೀಲಾ ಕಾಶಿ, ಭೀಮಾಶಂಕರ ಹೋಳಿಕಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಸುನೀಲ್ ದೊಡ್ಡಮನಿ, ಜಯಪ್ರಕಾಶ್ ಕಮಕನೂರ, ಶಿವರುದ್ರಪ್ಪ ಭೀಣ್ಣಿ, ಅರವಿಂದ ಚವ್ಹಾಣ, ವೀರಣ್ಣಗೌಡ ಪರಸರೆಡ್ಡಿ, ರಾಜಶೇಖರ್ ತಿಮ್ಮನಾಯಕ,
ಶಿವಯ್ಯ ಗುತ್ತೇದಾರ, ದೇವಿಂದ್ರ ಅರಣಕಲ್, ಶಿವುಕುಮಾರ ಯಾಗಾಪೂರ, ಚಂದ್ರಶೇಖರ ಕಾಶಿ, ಹಣಮಂತ ಸಂಕನೂರ, ಜಗಣ್ಣಗೌಡ ರಾಮತೀರ್ಥ, ವೀರುಪಾಕ್ಷಪ್ಪ ಗಡ್ಡದ್, ಮಲ್ಲಪ್ಪ ಹೊಸಮನಿ, ಶಿವುಕುಮಾರ ಸುಲ್ತಾನಪೂರ, ಯಲ್ಲಾಲಿಂಗ ಪೂಜಾರಿ, ಶಿವಕಾಂತ ಬೆಣ್ಣೂರಕರ್, ದೇವಿಂದ್ರ ಯಾಬಾಳ, ಬಸವರಾಜ ಪೂಜಾರಿ, ಮಲ್ಲಿಕಾರ್ಜುನ ಬೆಣ್ಣೂರಕರ್, ರಸೂಲ್ ಮುಸ್ತಫಾ, ಸೂರ್ಯಕಾಂತ ರದ್ದೇವಾಡಿ, ಮಲ್ಲಿಕಾರ್ಜುನ ಕಾಳಗಿ, ರಾಮಲಿಂಗ ಬಾನರ್, ಸಿದ್ದುಗೌಡ ಅಫಜಲಪುರ, ನಾಗರೆಡ್ಡಿ ಗೋಪಸೇನ್, ನಿಂಗಣ್ಣ ಹೆಗಲೇರಿ, ಭೀಮಸಿಂಗ ಚವ್ಹಾಣ, ಜಗದೀಶ್ ಚವ್ಹಾಣ, ಸಿದ್ದಮ್ಮ ಕಾಶನೂರ, ಮಲ್ಲಿಕಾರ್ಜುನ ಮುಡಬೂಳಕರ್, ಶೇಖ್ ಬಬ್ಲು, ಸಂಜಯ್ ಬುಳಕರ್, ಬಾಬು ಕಾಶಿ, ಸಂತೋಷ ಪೂಜಾರಿ, ಕಾಶಪ್ಪ ಡೋಣಗಾಂವ, ದಶರಥ್, ಮಾಣಿಕ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.






























