
ಜೇವರ್ಗಿ:ಜು.25:ದೆಹಲಿಯಲ್ಲಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ಪೆÇಲೀಸ್ ದೌರ್ಜನ್ಯ ಮತ್ತು ಲಾಠಿಚಾರ್ಜ್ ಖಂಡಿಸಿ ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಶುಕ್ರವಾರ ಜೇವರ್ಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ಹೋರಾಟದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಯುವಜನರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೇವರ್ಗಿ ವಿದ್ಯಾರ್ಥಿ ಹೋರಾಟ ಸಮಿತಿ,ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಂISಈ)ಹಾಗೂ ಪ್ರಗತಿಪರ ಚಿಂತಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ ಈ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ದೆಹಲಿ ಪೆÇಲೀಸರ ದೌರ್ಜನ್ಯದ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ಕೇಳುವ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸುವುದು ಅತ್ಯಂತ ಖಂಡನೀಯ. ವಿದ್ಯಾರ್ಥಿ ಶಕ್ತಿಯನ್ನು ಬೆದರಿಕೆಯಿಂದ ಅಡಗಿಸಲು ಸಾಧ್ಯವಿಲ್ಲ” ಎಂದು ಮುಖಂಡರು ಎಚ್ಚರಿಸಿದರು.
ಪ್ರಮುಖರ ಭಾಗವಹಿಸುವಿಕೆ:
ಈ ಹೋರಾಟದಲ್ಲಿ ಪ್ರಗತಿಪರ ಚಿಂತಕರು, ದಲಿತ ಪರ ಸಂಘಟನೆಗಳ ಮುಖಂಡರು ಹಾಗೂ ಪ್ರಮುಖ ನಾಯಕರಾದ ಇಬ್ರಾಹಿಂ ಪಟೇಲ್ ಯಾಳವಾರ, ಮೊಹಿಯುದ್ದೀನ್ ಇನಾಂದಾರ್ (ವಕೀಲರು), ಮಹೇಶ್ ಕುಮಾರ್ ರಾಥೋಡ್, ಬಾಬು ಬಿ. ಪಾಟೀಲ್, ಬಿ.ಎಚ್. ಮಾಲಿ ಪಾಟೀಲ್, ರಾಜಾ ಪಟೇಲ್, ಸಿದ್ದು ಕೆರೂರ, ಸದ್ದಾಂ ಶೇಖ್ ಹುಸೇನ್, ರಾಜು ಮುದ್ದಡಗಿ, ಭೀಮಾಶಂಕರ, ಮೊಹಮ್ಮದ್ ಚೌದ್ರಿ, ಸಿದ್ಧರಾಮ ಕಟ್ಟಿ, ರವಿ ಕುಳಗೇರಿ, ಸಮೀರ್, ಅಜೀಜ್ ಪಟೇಲ್ ಯಾಳವಾರ ಸೇರಿದಂತೆ ಅನೇಕರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಸ್ಥಳೀಯ ತಹಶೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುವ ಮೂಲಕ ಮೆರವಣಿಗೆಯನ್ನು ಮುಕ್ತಾಯಗೊಳಿಸಲಾಯಿತು.
































