
ಮಾಲೂರು ಮೇ೧೨: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಸಾಹಿತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನುಮದಿನವನ್ನು ಮಾಸ್ತಿ ಗ್ರಾಮದಲ್ಲಿ ಜೂನ್ ೬ರಂದು ಗ್ರಂಥಾಲಯ ಸ್ಮಾರಕದಲ್ಲಿ ಅವರ ಭಾವಚಿತ್ರಕ್ಕೆ ಪುಷ ನಮನ ಅರ್ಪಿಸಿ ಸರಳವಾಗಿ ಆಚರಣೆ ಮಾಡಿ, ಮಾಲೂರು ನಗರದಲ್ಲಿ ಜೂನ್ ೮ರಂದು ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಜನ್ಮ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ನಗರದ ತಾಲೂಕು ಕಚೇರಿಯ ಶಾಸಕರ ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನ್ಮದಿನದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರು ಜ್ಞಾನಪೀಠ ಪ್ರಶಸ್ತಿ ಪಡೆದ ಹಿರಿಯ ಸಾಹಿತಿಗಳಾಗಿದ್ದು, ಅವರ ಜನುಮ ದಿನವನ್ನು ಪ್ರತಿವರ್ಷ ಮಾಸ್ತಿ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಪ್ರಸಕ್ತ ವಷ ಜೂನ್ ೮ರಂದು ತಾಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿರುವುದರಿಂದ ಮಾಸ್ತಿ ಗ್ರಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಗ್ರಂಥಾಲಯ ಸ್ಮಾರಕದಲ್ಲಿ ಸರಳವಾಗಿ ಆಚರಣೆ ಮಾಡಿ ನಗರದಲ್ಲಿ ನಡೆಯುವ ವೇದಿಕೆಯಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಹುಟ್ಟೂರಾದ ಮಾಸ್ತಿಯಲ್ಲಿ ದ್ವಿಪಥ ರಸ್ತೆ ಹಾಗೂ ಮಾಸ್ತಿಯವರ ವೃತ್ತವನ್ನು ಅಭಿವೃದ್ಧಿಪಡಿಸಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗುವುದು,
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಮಾಸ್ತಿ ಅವರ ಸಾಹಿತ್ಯದ ವಿಚಾರಧಾರೆಗಳನ್ನು ಪ್ರಚಾರಪಡಿಸುವುದರ ಮೂಲಕ ಸಾಹಿತಿಗಳು ಹಾಗೂ ಕಲಾವಿದರನ್ನು ಗೌರವಿಸಲಾಗುವುದು ಎಂದರು.
ಸಭೆಯಲ್ಲಿ ತಹಶಿಲ್ದಾರ್ ಎಂ.ವಿ.ರೂಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿಜಯನರಸಿಂಹ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ವಿ ಮುನೇಗೌಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹನುಮಂತಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆಂಜಿನಪ್ಪ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಮೂರ್ತಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗೋವಿಂದೇಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಶಿವಕುಮಾರ್, ದಿವ್ಯ, ಪೆದ್ದಣ್ಣ, ಜಬಿವುಲ್ಲಾ, ಕೃಷ, ರಂಜು ಮೌಳಿ, ಅನ್ಸರ್ ಭಾಷಾ, ವೀಣಾ, ಮುಖಂಡರಾದ ಅಶ್ವಥ್‌ರೆಡ್ಡಿ, ಅಕ್ರಂಪಾಷಾ, ಎ.ಕೆ.ವೆಂಕಟೇಶ್, ಸಂತೋಷ್, ಎಸ್.ಎಮ್.ವೆಂಕಟೇಶ್, ನಾಗೇಶ್, ಸಾಹಿತಿಗಳಾದ ಜಮುಚಂದ್ರ, ಮುನಿಕೃಷಪ್ಪ, ಮಾಸ್ತಿ ಗ್ರಾಮ ಪಂಚಾಯಿತಿ ಪಿಡಿಒ ನವೀನ್, ಮಾಸ್ತಿ ಗ್ರಂಥಾಲಯದ ಶ್ರೀನಾಥ್, ಇನ್ನಿತರರು ಹಾಜರಿದ್ದರು.


























