Home ಜಿಲ್ಲೆ ಕಲಬುರಗಿ ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನದ ಸದುಪಯೋಗವಾಗಲಿ

ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನದ ಸದುಪಯೋಗವಾಗಲಿ

ಕಲಬುರಗಿ: ಯಾವುದೇ ಒಂದು ರಾಷ್ಟçದ ಅಭಿವೃದ್ಧಿಯು ಅಲ್ಲಿನ ವಿಜ್ಞಾನದ ಬೆಳವಣಿಗೆಯ ಮೇಲೆ ಅವಲಂಬಿಸಿದೆ. ವಿಜ್ಞಾನವು ಹೊಸ ಸಂಶೋಧನೆಗಳ ಮೂಲಕ ಅನೇಕ ಸೌಕರ್ಯಗಳನ್ನು ದೊರೆಯುವಂತೆ ಮಾಡಿ, ಯಾವುದೇ ರಾಷ್ಟçವು ಅತ್ಯಂತ ಶೀಘ್ರವಾಗಿ ಅಭಿವೃದ್ಧಿ ಹೊಂದುವAತೆ ಮಾಡುತ್ತದೆ. ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನದ ಸದುಪಯೋಗವಾಗುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಅಭಿಪ್ರಾಯಪಟ್ಟರು.
ನಗರದ ಆಳಂದ ರಸ್ತೆಯ ಖಾದ್ರಿ ಜೆ.ಆರ್ ನಗರದಲ್ಲಿನ ‘ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವಿಶ್ವ ಶಾಂತಿ ಮತ್ತು ಅಭಿವೃದ್ಧಿಗಾಗಿ ವಿಜ್ಞಾನ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.
ವಿಜ್ಞಾನವು ರಾಷ್ಟçದ ಅಭಿವೃದ್ಧಿಯ ಚಾಲನಾ ಶಕ್ತಿಯಾಗಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ವಿಜ್ಞಾನದ ಬಗ್ಗೆ ತುಂಬಾ ಆಸಕ್ತಿ, ಸಂಶೋಧನಾ ಪ್ರವೃತ್ತಿ ಬೆಳೆಯುವಂತೆ ಶಿಕ್ಷಕರು ಪೂರಕವಾದ ವಾತಾವರಣ ನಿರ್ಮಿಸಬೇಕು. ಪ್ರತಿವರ್ಷ ನ-೧೦ರಂದು ಈ ದಿನವನ್ನು ಆಚರಿಸಲಾಗುತ್ತದೆ. ಪ್ರಸಕ್ತ ಸಮಾಜದಲ್ಲಿ ಜನಸಾಮಾನ್ಯರ ದೈನಂದಿನ ಜೀವನದಲ್ಲಿ ವಿಜ್ಞಾನದ ಮಹತ್ವವನ್ನು ಸಾರುವುದು ಇದರ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕರಾವಿಪ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಉಪನ್ಯಾಸಕ ಮಹಾದೇವ ಬಿರಾದಾರ, ಸಮಾಜ ಸೇವಕ ಓಂಕಾರ ವಠಾರ ಸೇರಿದಂತೆ ಇನ್ನಿತರರಿದ್ದರು.