Home ಜಿಲ್ಲೆ ನೀರು, ಪರಿಸರ ಸಂರಕ್ಷಣೆಗೆ ಮುಶ್ರೀಫ್ ಕರೆ

ನೀರು, ಪರಿಸರ ಸಂರಕ್ಷಣೆಗೆ ಮುಶ್ರೀಫ್ ಕರೆ

ಸಂಜೆವಾಣಿ ವಾರ್ತೆ,
ವಿಜಯಪುರ, ಅ. ೨೪: ದಸರಾ ಹಾಗೂ ವಿಜಯದಶಮಿ ಹಬ್ಬವು ಸಮಾಜದಲ್ಲಿ ಸೌಹಾರ್ದತೆ, ಸ್ನೇಹ ಮತ್ತು ಸಹೋದರತ್ವವನ್ನು ಮತ್ತಷ್ಟು ಬಲಪಡಿಸಲಿ ಎಂದು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ ಬುಧವಾರ ದಸರಾ ಅಂಗವಾಗಿ ಸಾರ್ವಜನಿಕರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡ ಅವರು, ನಗರ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಗಣ್ಯರು, ಕಾರ್ಯಕರ್ತರು, ಅಭಿಮಾನಿಗಳು, ಆಪ್ತರು ಹಾಗೂ ಸ್ನೇಹಿತರೊಂದಿಗೆ ಆತ್ಮೀಯವಾಗಿ ಬೆರೆತು ವಿಜಯದಶಮಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಸಾರ್ವಜನಿಕರ ಉಭಯ ಕುಶಲೋಪರಿ ವಿಚಾರಿಸಿದ ಮುಶ್ರೀಫ್, ಹಬ್ಬದ ಶುಭಾಶಯಗಳನ್ನು ಕೋರಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡು ಪರಸ್ಪರ ಸೌಹಾರ್ದತೆ ಹಾಗೂ ಸ್ನೇಹದ ಸಂದೇಶ ಹಂಚಿಕೊAಡರು.
ಮಳೆ ಕೊರತೆಯಿಂದಾಗಿ ಈ ವರ್ಷ ಜಲ ಸಂಕಷ್ಟದ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ನೀರಿನ ಸಂರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ಪರಿಸರವನ್ನು ಸಂರಕ್ಷಿಸುವುದರ ಜೊತೆಗೆ ನೀರನ್ನು ಹಿತಮಿತವಾಗಿ ಬಳಸುವ ಮೂಲಕ ಭವಿಷ್ಯದ ಪೀಳಿಗೆಗೆ ಜಲ ಸಂಪನ್ಮೂಲವನ್ನು ಉಳಿಸಬೇಕು ಎಂದು ಮುಶ್ರೀಫ್ ಸಲಹೆ ನೀಡಿದರು.
ದಸರಾ ಹಬ್ಬದ ಸಂದರ್ಭದಲ್ಲಿ ಎಲ್ಲರೂ ಜಾತಿ, ಧರ್ಮದ ಭೇದ ಮರೆತು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆಯಿಂದ ಬದುಕುವ ಮೂಲಕ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡಬೇಕು ಎಂದು ಅವರು ಆಶಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸ್ನೇಹಿತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.