
ಬೀದರ:ಅ.21:ಹಲವು ವಿಸ್ಮಯಗಳನ್ನು ಒಡಲಲ್ಲಿ ಇಟ್ಟು ಕೊಂಡಿರುವ ಹೊನ್ನಿಕೇರಿ ಸಿದ್ದೇಶ್ವರ ದೇವಾಲಯವು ಬೀದರ್ ಜಿಲ್ಲೆಯ, ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದಲ್ಲಿ ಬೆಟ್ಟದ ಮೇಲೆ ನೆಲೆಗೊಂಡಿರುವ ಒಂದು ಶತಮಾನದಷ್ಟು ಹಳೆಯ ಸುಪ್ರಸಿದ್ಧ ದೇವಾಲಯವಾಗಿದೆ. ಈ ದೇವಾಲಯಕ್ಕೆ ನಮ್ಮ ರಾಜ್ಯ ಸೇರಿ ಆಂಧ್ರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಿಂದಲೂ ಭಕ್ತರನ್ನು ಆಕರ್ಷಿಸುತ್ತದೆ ದೇವಸ್ಥಾನದ ಅಭಿವೃದ್ಧಿಗಾಗಿ ನಾವೆಲ್ಲರೂ ಹಗಲಿರುಳು ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ಹೊನ್ನಿಕೇರಿ ಸಿದ್ಧೇಶ್ವರ ದೇವಸ್ಥಾನದಲ್ಲಿ ನವೆಂಬರ್ 10, 11 ಮತ್ತು 12ರಂದು ನಡೆಯಲಿರುವ ನೂತನ ಗೋಪುರದ ಕಳಸಾರೋಹಣ ಹಾಗೂ ಲಕ್ಷ ದೀಪೆÇೀತ್ಸವ, ವಿಶ್ವ ಕಲ್ಯಾಣ ಲೋಕ ಕಲ್ಯಾಣ, ಗ್ರಾಮ ಕಲ್ಯಾಣ ವಿಶೇಷ ಪೂಜೆ ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆ ಪ್ರಯುಕ್ತ ಇಲಾಖೆಗಳ ಅಧಿಕಾರಿಗಳೊಂದಿಗೆ ದೇವಸ್ಥಾನದ ಆವರಣದಲ್ಲಿ ಸಭೆ ನಡೆಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 10008 ಜಗದ್ಗುರುಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಭಕ್ತರಿಗೆ ಯಾವುದೇ ರೀತಿಯ ಅನಾನುಕೂಲ ಉಂಟಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮಸ್ಥರು ಸಹ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹೊನ್ನಿಕೇರಿ ಗ್ರಾಮದ ಬೆಟ್ಟದ ನಡುವೆ ಇರುವ ಶ್ರೀ ಕ್ಷೇತ್ರ ಹೊನ್ನಿಕೇರಿ ಸಿದ್ದೇಶ್ವರ ದೇಗುಲ. ಶತಮಾನದಷ್ಟು ಪುರಾತನವಾದ ಈ ದೇವಾಲಯ, ಹಲವು ವಿಭಿನ್ನ ವಿಸ್ಮಯಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿದೆ. ಬೀದರ್ ಜಿಲ್ಲೆಯ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಈ ದೇಗುಲಕ್ಕೆ ನಮ್ಮ ರಾಜ್ಯ ಸೇರಿ ಆಂಧ್ರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಅನೇಕ ರಾಜ್ಯಗಳಿಂದ ಭಕ್ತರ ದಂಡು ಹರಿದು ಬರುತ್ತದೆ.
ದೇಗುಲದ ಸುತ್ತ ನೀರಿನ ಹೊಂಡಗಳು ಇದ್ದು, ನೀರು ಕುಡಿದರೆ ದೇವರ ಆಶೀರ್ವಾದ ದೊರೆಯುತ್ತದೆ ಎನ್ನುವುದು ಭಕ್ತರ ನಂಬಿಕೆಯಾಗಿದೆ. ಪ್ರತಿ ಅಮಾವಾಸ್ಯೆ, ಹುಣ್ಣಿಮೆ ಕೂಡಾ ಸಾವಿರಾರು ಭಕ್ತರು ಇಲ್ಲಿಗೆ ಬಂದು ತಮ್ಮಗೆ ಬರುವ ಭಕ್ತರು ದೇವರಿಗೆ ಹರಕೆ ರೂಪದಲ್ಲಿ ಪ್ರತಿಯೊಂದು ಮೆಟ್ಟಿಲಿಗೆ ದೀಪ ಹಚ್ಚಿ ತೆಂಗಿನಕಾಯಿ ಒಡೆದು ದೇವರಿಗೆ ಪೂಜೆ ಸಲ್ಲಿಸುವುದು ವಿಶೇಷ.
ಇಲ್ಲಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬಂದು ಹರಕೆ ತಿರಿಸಿ ದೇವರ ದರ್ಶನ ಪಡೆದುಕೊಂಡು ಹೋಗುತ್ತಾರೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉತ್ತಮ ಮೂಲ ಸೌಕರ್ಯ ಕಲ್ಪಿಸಬೇಕು. ಮುಜರಾಯಿ ಇಲಾಖೆಯ ಸುಪರ್ದಿಗೆ ಬರುವ ಈ ದೇವಸ್ಥಾನಕ್ಕೆ ಕೊಟ್ಯಾಂತರ ರೂಪಾಯಿ ಹಣ ಹರಿದುಬರುತ್ತದೆ ಅದರಿಂದ ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು.
ದೇವಸ್ಥಾನಕ್ಕೆ ಬರುವ ಸಾವಿರಾರು ಭಕ್ತರಿಗಾಗಿ ಯಾತ್ರಿ ನಿವಾಸ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಇನ್ನೆನೂ ಕಾಮಗಾರಿ ಪ್ರಾರಂಭಿಸಲಾಗುವುದು ನನ್ನ ಅನುದಾನದಲ್ಲಿ ಸಹ ವಿವಿಧ ಯೋಜನೆಗಳು ರೂಪಿಸಿ ಹೆಚ್ಚಿನ ಅಗತ್ಯ ಕಾಮಗಾರಿ ಕೈಗೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.
ಸಭೆಯ ನಂತರ ಶಾಸಕರು ಅಧಿಕಾರಿಗಳು ಮತ್ತು ಗ್ರಾಮಸ್ಥರೊಂದಿಗೆ ಸೇರಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಅನಂತ ಕುಲಕರ್ಣಿ, ಗ್ರಾಪಂ ಅಧ್ಯಕ್ಷ ಸತೀಶ, ಉಪಾಧ್ಯಕ್ಷ ಶಿವಕುಮಾರ ಕೋಳಾರ, ಮುಖಂಡರಾದ ಹಣಮಂತರಾವ ಮೈಲಾರೆ, ಸುರೇಶ ಮಾಶೆಟ್ಟಿ, ಸಂಗಮೇಶ ಪಾಟೀಲ್, ಸಂಜು ರೆಡ್ಡಿ, ಅನೀಲ್ ಪಾಟೀಲ, ಭೀಮರಾವ ಖೇಲ್ವಾ, ರಾಜಶೇಖರ ನೌಬಾದೆ, ಸಚೀನ್ ಕೋಣಿ, ಸಿದ್ದಯ್ಯ ಸ್ವಾಮಿ, ಶಿವಾನಂದ ಸ್ವಾಮಿ, ದೇವದಾಸ ರೆಡ್ಡಿ, ಬಾಲಾಜಿ ಖೇಲ್ವಾ ಗ್ರಾಮದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.