Home ಮುಖಪುಟ ಸುದ್ದಿ ಬರ ಮುನ್ನೇಚ್ಚರಿಕೆ ಕ್ರಮಕ್ಕೆ ಸಭೆ : ಸಿಎಂ

ಬರ ಮುನ್ನೇಚ್ಚರಿಕೆ ಕ್ರಮಕ್ಕೆ ಸಭೆ : ಸಿಎಂ

ಹಿರಿಯೂರು(ಚಿತ್ರದುರ್ಗ):ಜು೨೫ ಬರದ ಪರಿಸ್ಥಿತಿ ಹಾಗೂ ಮುಂಜಾಗ್ರತಾ ಕ್ರಮಬೆಳಗಾವಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಆಲಮಟ್ಟಿ ಜಲಾಶಯ ಪ್ರದೇಶವನ್ನು ಹೊರತುಪಡಿಸಿ ರಾಜ್ಯಾದ್ಯಂತ ಬರದ ಛಾಯೆ ಆವರಿಸಿದೆ. ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ಬರ ಪರಿಸ್ಥಿತಿ ಗೋಚರಿಸುತ್ತಿದ್ದು, ರೈತರಿಗೆ ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.


ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ,ಈ ಕುರಿತು ಶೀಘ್ರವೇ ಸ್ಥಳೀಯ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.
ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ವಿಚಾರದ ಕುರಿತಂತೆ, ಗ್ರಾಮೀಣ ಭಾಗದ ಶಾಲೆಗಳ ಮಟ್ಟವನ್ನು ಖಾಸಗಿ ಶಾಲೆಗಳ ದರ್ಜೆಗೆ ಏರಿಸುವುದು ಮತ್ತು ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸುವುದು ನಮ್ಮ ಉದ್ದೇಶ. ಇದರಿಂದ ಶಿಕ್ಷಣಕ್ಕಾಗಿ ಹಳ್ಳಿಯಿಂದ ನಗರಗಳಿಗೆ ಗುಳೆ ಹೋಗುವುದು ತಪ್ಪುತ್ತದೆ.


ಖಾಸಗಿ ಶಾಲೆಗಳ ಒಕ್ಕೂಟಕ್ಕೂ ನನಗೂ ಒಪ್ಪಂದವಿದೆ. ಎಲ್ಲ ಖಾಸಗಿ ಶಾಲೆಗಳಿಗೂ ಇದು ಅನ್ವಯಿಸುವುದಿಲ್ಲ, ಉತ್ತಮ ಶುಲ್ಕ ಪಡೆಯುವ ದೊಡ್ಡ ಸಂಸ್ಥೆಗಳು ಹಾಗೂ ಉದ್ಯಮಿಗಳು ಇದಕ್ಕೆ ಕೈಜೋಡಿಸಲಿದ್ದಾರೆ. ಯಾರಿಗಾದರೂ ವಿರೋಧವಿದ್ದರೆ ನೇರವಾಗಿ ನನ್ನ ಬಳಿ ಬಂದು ಮಾತನಾಡಲಿ” ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ


ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, “ನೀಟ್ ಅಕ್ರಮದಿಂದಾಗಿ ಇಂದು ದೇಶಾದ್ಯಂತ ವಿದ್ಯಾರ್ಥಿಗಳು ದಂಗೆ ಎದ್ದಿದ್ದಾರೆ. ನಾವು ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದು, ಪರೀಕ್ಷೆ ರದ್ದುಗೊಳಿಸಿ ತನಿಖೆ ನಡೆಸಲು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದೇವೆ.
ಈಗಷ್ಟೇ ಪ್ರಧಾನಿ ಮೋದಿ ಅವರು ಕಣ್ಣು ತೆರೆದಿದ್ದಾರೆ. ಇತ್ತ ಬಿಜೆಪಿ ತನ್ನ ಮೇಲಿನ ಅವಮಾನ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದೆ” ಎಂದು ಕಿಡಿಕಾರಿದರು.ಬಿಡದಿ ವಿಚಾರ ಹಾಗೂ ರೈತರ ಪ್ರತಿಭಟನೆ ಕೆಪಿಎಸ್ಸಿ ಅಧ್ಯಕ್ಷರ ನೇಮಕದ ಕುರಿತು ಪ್ರತಿಕ್ರಿಯಿಸಿ, “ಪ್ರಸ್ತುತ ಕೆಪಿಎಸ್ಸಿ ಅಧ್ಯಕ್ಷರನ್ನು ನೇಮಿಸಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಈಗ ಅವರೇ ವಿರೋಧಿಸುತ್ತಿರುವುದು ಹಾಸ್ಯಾಸ್ಪದ. ಯಾವುದೇ ತನಿಖೆಗೂ ನಾವು ಸಿದ್ಧವಿದ್ದು, ಸೂಕ್ತ ಕ್ರಮಕ್ಕೆ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ” ಎಂದರು.


ಬಿಡದಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ, “ಪ್ರತಿಭಟನಾ ನಿರತ ರೈತರು ನಮ್ಮವರೇ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಸಹಜ. ಸರ್ಕಾರದ ಕಡೆಯಿಂದ ಯಾರ ಮೇಲೆಯೂ ಒತ್ತಡವಿಲ್ಲ, ಯಾರಿಗೂ ತೊಂದರೆ ಕೊಡುವ ಪ್ರಶ್ನೆಯೇ ಇಲ್ಲ. ಎಲ್ಲರೂ ಸೇರಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಸ್ಪಷ್ಟಪಡಿಸಿದರು. ಇತರ ಪ್ರಮುಖ ಮುಂದಿನ ವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.