
ಬೀದರ್: ಜೂ.13:ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ರಾಜ್ಯದ ನೂತನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಬೆಂಗಳೂರಿನಲ್ಲಿ ಗುರುವಾರ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘದಿಂದ ಬೆಂಗಳೂರಿನಲ್ಲಿ ಶುಕ್ರವಾರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕುಂದು ಕೊರತೆ ಆಲಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮುನ್ನ ಸಂಘದ ಪದಾಧಿಕಾರಿಗಳು ರಾಜ್ಯದ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಗ್ರೇಡ್ ಬಿ ದರ್ಜೆಗೆ ಏರಿಸುವ ಹಾಗೂ ಸಮಸ್ಯೆಗಳ ಕುರಿತು ಚರ್ಚೆಗೆ ಸಭೆ ಕರೆಯಬೇಕು ಎಂದು ಸಂಘದ ಪದಾಧಿಕಾರಿಗಳು ಸಚಿವರನ್ನು ಕೋರಿದರು.
ಸಂಘದ ರಾಜ್ಯ ಅಧ್ಯಕ್ಷ ರಮೇಶ ನಡಗೇರಿ ಅವರು ಶಾಲು ಹೊದಿಸಿ, ಪುಷ್ಪಗುಚ್ಛ ಕೊಟ್ಟು, ಬಸವಣ್ಣನವರ ಮೂರ್ತಿ ಸ್ಮರಣಿಕೆಯಾಗಿ ನೀಡಿ ಗೌರವಿಸಿದರು.
ರಾಜ್ಯ ಉಪಾಧ್ಯಕ್ಷ ಜಯಗೌಡ ಪಾಟೀಲ, ನಿರ್ದೇಶಕಿ ರಾಜೇಶ್ವರ ಸಾಹು, ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಜಾಬಾ, ಬೆಳಗಾವಿ ಜಿಲ್ಲಾ ಅಧ್ಯಕ್ಷ ಉಸ್ಮಾನ್, ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ, ಬೀದರ್ ತಾಲ್ಲೂಕು ಅಧ್ಯಕ್ಷ ಅನಿಲಕುಮಾರ ಚಿಟ್ಟಾ ಮತ್ತಿತರರು ಇದ್ದರು.

























