Home ಜಿಲ್ಲೆ ಕಂದಾಯ ಆಡಳಿತ ಹಾಗೂ ಇಲಾಖಾ ಕಾರ್ಯಕಲಾಪಗಳ ಪ್ರಗತಿ ಪರಿಶೀಲನಾ ಸಭೆ

ಕಂದಾಯ ಆಡಳಿತ ಹಾಗೂ ಇಲಾಖಾ ಕಾರ್ಯಕಲಾಪಗಳ ಪ್ರಗತಿ ಪರಿಶೀಲನಾ ಸಭೆ

ಗದಗ,ಆ೧: ಸಾರ್ವಜನಿಕ ಸೇವೆ ಮತ್ತು ಬಾಕಿ ಕಡತಗಳ ವಿಲೇವಾರಿಯಲ್ಲಿ ಅನಗತ್ಯ ವಿಳಂಬ ಧೋರಣೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ÷್ಯ ವಹಿಸಬಾರದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀಮತಿ ಜಾನಕಿ ಕೆ. ಎಂ.ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಕಂದಾಯ, ಆಡಳಿತ ಹಾಗೂ ಇಲಾಖಾ ಕಾರ್ಯಕಲಾಪಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಭೆಯಲ್ಲಿ ಇಲಾಖಾವಾರು ಪರಿಶೀಲನೆ ನಡೆಸಿದ ಆಯುಕ್ತರು, ವಿವಿಧ ವಿಭಾಗಗಳಲ್ಲಿ ಬಾಕಿ ಉಳಿದಿರುವ ಆಡಳಿತಾತ್ಮಕ ಕಡತಗಳು, ಸಾರ್ವಜನಿಕ ಅರ್ಜಿಗಳು ಹಾಗೂ ಜಮೀನು ಮತ್ತು ಕಂದಾಯಕ್ಕೆ ಸಂಬAಧಿಸಿದ ಪ್ರಸ್ತಾವನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಹಲವು ವರ್ಷಗಳಿಂದ ಅಥವಾ ತಿಂಗಳುಗಳಿAದ ವಿಲೇವಾರಿಯಾಗದೇ ಬಾಕಿ ಉಳಿದಿರುವ ಕಡತಗಳನ್ನು ತಕ್ಷಣವೇ ಪರಿಶೀಲಿಸಿ, ನಿಯಮಾನುಸಾರ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಡತಗಳಿಗೆ ಸಂಬAಧಿಸಿದ ಅಗತ್ಯ ಪೂರಕ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಬೇಕು. ಆಡಳಿತಾತ್ಮಕ ಅಥವಾ ತಾಂತ್ರಿಕ ಲೋಪಗಳಿದ್ದಲ್ಲಿ ತಕ್ಷಣವೇ ಸಂಬAಧಪಟ್ಟವರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದರು.

ಮಾಹಿತಿ ಹಕ್ಕು ಕಾಯ್ದೆ (ಖಖಿI) ಹಾಗೂ ಅಪೀಲುಗಳಿಗೆ ಸಂಬAಧಿಸಿದAತೆ ನಿಗದಿತ ಸಮಯದೊಳಗೆ ನಿಖರವಾದ ಮಾಹಿತಿ ಒದಗಿಸಬೇಕು. ಅರ್ಜಿಗಳನ್ನು ಅನಗತ್ಯವಾಗಿ ಮುಂದೂಡುವ ಧೋರಣೆ ಬಿಡಬೇಕು ಎಂದರು.

ಅಧಿಕಾರಿಗಳು ಕೇವಲ ಕಚೇರಿಯ ಕಡತಗಳಿಗಷ್ಟೇ ಸೀಮಿತವಾಗದೆ, ಅಗತ್ಯವಿದ್ದಲ್ಲಿ ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು. ಉಪವಿಭಾಗ ಮಟ್ಟದಲ್ಲಿ ನಿಯಮಿತವಾಗಿ ಸಭೆಗಳನ್ನು ನಡೆಸಿ ಕಂದಾಯ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಹಾಗೂ ಸರ್ಕಾರದ ನಿಯಂತ್ರಣದಲ್ಲಿರುವ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಸುಸೂತ್ರವಾಗಿ ಸೇವೆಗಳನ್ನು ತಲುಪಿಸಬೇಕು. ಅರ್ಚಕರು, ದೇವಾಲಯದ ಸಿಬ್ಬಂದಿ ಹಾಗೂ ತಹಶೀಲ್ದಾರ್‌ಗಳು ಆಡಳಿತಾತ್ಮಕ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಆಧಾರ್ ಹಾಗೂ ಆರ್.ಟಿ.ಸಿ (ಖಖಿಅ) ಜೋಡಣೆ: ಅರ್ಚಕರು ಹಾಗೂ ದೇವಾಲಯದ ಆಸ್ತಿ/ಸೇವೆಗಳಿಗೆ ಸಂಬAಧಿಸಿದAತೆ ಆಧಾರ್ ಮತ್ತು ಭೂ ದಾಖಲೆಗಳ (ಖಖಿಅ) ಮಾಹಿತಿಗಳನ್ನು ಕಡ್ಡಾಯವಾಗಿ ನವೀಕರಿಸಿ ಸರಿಪಡಿಸುವುದು.

ತಹಶೀಲ್ದಾರ್ ಮತ್ತು ಶಿರಸ್ತೇದಾರರ ಜವಾಬ್ದಾರಿ: ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳು ಹಾಗೂ ಗ್ರೇಡ್-೨ ತಹಶೀಲ್ದಾರ್‌ಗಳು ದೇವಾಲಯಗಳ ಪೂಜಾ ವಿಧಿವಿಧಾನಗಳು ಮತ್ತು ಸಿಬ್ಬಂದಿ ನಿರ್ವಹಣೆಯ ಪ್ರಗತಿಯನ್ನು ಖುದ್ದಾಗಿ ಪರಿಶೀಲಿಸುವುದು.

ಸುರಕ್ಷತೆ ಮತ್ತು ಸಿ.ಸಿ.ಟಿ.ವಿ ವ್ಯವಸ್ಥೆ: ದೇವಾಲಯಗಳ ಸುರಕ್ಷತೆಗೆ ಹಾಗೂ ಪಾರದರ್ಶಕತೆಗೆ ಕಡ್ಡಾಯವಾಗಿ ಸಿ.ಸಿ.ಟಿ.ವಿ (ಅಅಖಿಗಿ) ಕ್ಯಾಮೆರಾಗಳನ್ನು ಅಳವಡಿಸಿ, ನಿರಂತರವಾಗಿ ಮಾನಿಟರ್ ಮಾಡುವುದು ಎಂದರು.

ಲೆಕ್ಕಪತ್ರ ಪಾರದರ್ಶಕತೆ: ದೇವಾಲಯಗಳ ಆದಾಯ, ಹೂಂಡಿ ಎಣಿಕೆ ಹಾಗೂ ಖರ್ಚು-ವೆಚ್ಚಗಳ ಲೆಕ್ಕಪತ್ರಗಳನ್ನು ನಿಯಮಿತವಾಗಿ ಪರಿಶೋಧಿಸಿ ವರದಿ ಸಲ್ಲಿಸಬೇಕು ಎಂದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ನಮ್ಮ ಮೊದಲ ಕರ್ತವ್ಯವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ. ಎಂ. ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಾಲೂಕು ಮಟ್ಟದ ಭೂ ಕಂದಾಯ ಪ್ರಕ್ರಿಯೆಗಳು, ಆಕಾರ್‌ಬಂಧ್‌ಗೆ ಸಂಬAಧಿಸಿದ ತಿದ್ದುಪಡಿಗಳು ಹಾಗೂ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿ ಕುರಿತು ಮುಖ್ಯವಾಗಿ ಗಮನಹರಿಸಬೇಕು. ಗ್ರಾಮ ಮಟ್ಟದಲ್ಲಿ ಖಾತೆ ಬದಲಾವಣೆ ಹಾಗೂ ಕಷ್ಟಕರವಾದ ಪ್ರಕ್ರಿಯೆಗಳನ್ನು ಆದಷ್ಟು ಬೇಗ ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.