ಯಾದಗಿರಿ: ಕಲ್ಬುರ್ಗಿ ನಗರಕ್ಕೆ ಮಂಗಳವಾರ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯುಟಿ ಖಾದರ್ ಅವರನ್ನು ಕೆಪಿಸಿಸಿ ಸಂಯೋಜಕ ಹಾಗೂ ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನುದ್ದಿನ್ ಎಂ. ಜಮಾದಾರ ಭೇಟಿ ಮಾಡಿ ಮನವಿ ಮಾಡಿದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರೊಂದಿಗೆ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರಿಗೆ ಅಭಿನಂದಿಸಿ ಮನವಿ ಸಲ್ಲಿಸಿ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಲ ಮಾಡಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭೀ ಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನಾ ನಾಯಕ, ಯುವ ಮುಖಂಡ ಶಂಕರಲಿAಗಪ್ಪ ಬೋಳಶೆಟ್ಟಿ ಇನ್ನಿತರರು ಇದ್ದರು.





























