
ಕಲಬುರಗಿ,ಸೆ.29-ಇದೇ ತಿಂಗಳು 27 ರಂದು ಎಸ್.ಆರ್.ಎನ್. ಮೆಹತಾ ಶಾಲಾ ಒಳಾಂಗಣ ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಟೆಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ನಗರದ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟದ ಕೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
14 ಮತ್ತು 17 ವರ್ಷದ ವಯೋಮಿತಿಯ ಬಾಲಕ/ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೋರ ಮೆಹತಾ, ಪ್ರಾಚಾರ್ಯರಾದ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರು ಮತ್ತು ಟೆಬಲ್ ಟೆನ್ನಿಸ್ ತರಬೇತುದಾರರಾದ ಬಸವರಾಜ ತಳಕೇರಿ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಮಟ್ಟದ ಕ್ರೀಡಾ ಕೂಟವು ಅಕ್ಟೋಬರ್ 3,4 ಮತ್ತು 5 ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆಯಲಿದೆ.






















