
ಬೆಂಗಳೂರು ಮಾ. ೨೮ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದ್ದು ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ ಎಂದು . ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ .
ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ. ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೋರುತ್ತೇನೆ ಎಂದು. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾನುವಾರ ಹೊರುತಪಡಿಸಿ ವಾರದ ೬ ದಿನವು ಮೆಮು ರೈಲು ಸಂಚರಿಸಲಿದೆ. ಪ್ರತಿದಿನ ಬೆಳಿಗ್ಗೆ ೬.೪೫ಕ್ಕೆ ಯಲಹಂಕದಿಂದ ಹೊರಡುವ ಈ ರೈಲು ಯಶವಂತಪುರ, ತುಮಕೂರು ಮಾರ್ಗವಾಗಿ ಬೆಳಿಗ್ಗ ೧೧ ಗಂಟೆಗೆ ಅರಸೀಕೆರೆ ತಲುಪಲಿದೆ. ಪ್ರತಿ ದಿನ ಮಧ್ಯಾಹ್ನ ೨.೧೫ಕ್ಕೆ ಅರಸೀಕೆರೆ ಬಿಡುವ ಈ ರೈಲು ಸಂಜೆ ೭.೧೫ಕ್ಕೆ ಯಲಹಂಕ ತಲುಪಲಿದೆ.



























