
ಅರಸೀಕೆರೆ, ಜು. ೪- ೨೦೨೫ ೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. ೮೫ಕ್ಕಿಂತ ಹೆಚ್ಚು ಅಂಕ ಪಡೆದ ಭೋವಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಕಾರ್ಯಾಧ್ಯಕ್ಷ ಹಾಗೂ ನಗರಸಭಾ ಮಾಜಿ ಸದಸ್ಯ ಉಮಾಶಂಕರ್ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಭೋವಿ ಸಮುದಾಯದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ನಮ್ಮ ಸಮಾಜದ ಬಡ ಹಾಗೂ ಮಧ್ಯಮ ವರ್ಗದ ಹಿಂದುಳಿದ ಭೋವಿ ಸಮುದಾಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಸಹಕಾರಿಯಾಗುವಂತೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಎರಡು ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡನ್ನು ಈ ದೂರವಾಣಿ ಸಂಖ್ಯೆ ಗೆ ೯೮೪೫೦೦೬೯೩೧, ೯೭೪೨೪೪೭೭೯೪ ಕಳಿಸಬೇಕು ಎಂದು ತಿಳಿಸಿದರು.
ಆಸಕ್ತ ವಿದ್ಯಾರ್ಥಿಗಳು ಜು. ೧೦ ರೊಳಲಾಗಿ ನೋಂದಾಯಿಸಿಕೊಳ್ಳ ಬಹುದು. ಪ್ರತಿಭಾ ಪುರಸ್ಕಾರದ ದಿನಾಂಕರವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ ಕಾಂತರಾಜು ಭೋವಿ, ಸಮಾಜದ ಮುಖಂಡ ಪಡುವನಹಳ್ಳಿ ಶಿವಣ್ಮ, ಸಂಘದ ಖಜಾಂಚಿ ರೋಹಿತ್ ಮತ್ತಿತರರು ಉಪಸ್ಥಿತರಿದ್ದರು.

































