Home ಜಿಲ್ಲೆ ಕಲಬುರಗಿ ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ ಡಾ.ಅಜಯ್ ಸಿಂಗ್ ಭೇಟಿ: ಆರೋಗ್ಯ ಸವಲತ್ತುಗಳ ಪರಿಶೀಲನೆ

ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ ಡಾ.ಅಜಯ್ ಸಿಂಗ್ ಭೇಟಿ: ಆರೋಗ್ಯ ಸವಲತ್ತುಗಳ ಪರಿಶೀಲನೆ

ಜೇವರ್ಗಿ,ಅ.9-ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸಣ್ಣ ನೀವಾರಿ, ವಿಜ್ಞಾನ, ತಂತ್ರಜ್ಞಾನ ಸಚಿವರಾದ ಡಾ.ಅಜಯ್ ಸಿಂಗ್ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳು, ಚಿಕಿತ್ಸಾ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಮಹಿಳೆಯರು ಮತ್ತು ಮಕ್ಕಳಿಗೆ ಗುಣಮಟ್ಟದ, ಸಮಯೋಚಿತ ಹಾಗೂ ಜನಸ್ನೇಹಿ ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಹಾಗೂ ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ, ಔಷಧ ಲಭ್ಯತೆ, ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳ ಆರೈಕೆಯ ವ್ಯವಸ್ಥೆ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡಿದರು.
ಜೇವರ್ಗಿ ಕ್ಷೇತ್ರದಲ್ಲಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಸುಧಾರಿಸಿ, ಪ್ರತಿಯೊಬ್ಬ ಮಹಿಳೆ ಮತ್ತು ಮಗುವಿಗೂ ಸುರಕ್ಷಿತ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಬದ್ದವಾಗಿದೆ. ತಾವೂ ಕೂಡಾ ಜೇವರ್ಗಿ, ಯಡ್ರಾಮಿ ಭಾಗದಲ್ಲಿ ಮಹಿಳೆಯರು, ಮಕ್ಕಳ ಆರೋಗ್ಯ ಸಂಬಂಧಿ ಸವಲತ್ತುಗಳ ನಿರ್ಮಾಣಕ್ಕೆ ಸದಾಕಾಲ ಬದ್ಧವೆಂದು ಡಾ.ಅಜಯ್ ಸಿಂಗ್ ಈ ಸಂದರ್ಭದಲ್ಲಿ ತಿಳಿಸಿದರು.