
ಸೇಡಂ:ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಈಜು ಕೊಳ ಸ್ಥಳಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲರು ಭೇಟಿ ನೀಡಿ, ಕಾಮಗಾರಿ ವೀಕ್ಷಣೆ ಮಾಡಿದರು.ಕಾಮಗಾರಿ ತ್ವರಿತ ಹಾಗೂ ಗುಣಮಟ್ಟದಿಂದ ಕೂಡಿರಲಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ವೇಳೆ ತಾಲೂಕಾಡಳಿತ ಅಧಿಕಾರಿಗಳು ಹಾಗೂ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

























