
ಬೀದರ. ಜು.೦೫: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೊಟ್ಟೆ ಗಳನ್ನು ಕೊಟ್ಟಿದ್ದಾರಾ? ಪಾಯಸ ತಿಂದಿದ್ದೀರಾ? ಎಂದು ಮಕ್ಕಳಲ್ಲಿ ವಿಚಾರಿಸಿ ಮಾಹಿತಿ ಪಡೆದ ಸಚಿವರು, ಅಂಗನವಾಡಿ ಕೇಂದ್ರದಲ್ಲಿ ತಯಾರಿಸಿದ ಚಿಕ್ಕಿಯನ್ನು ಸೇವಿಸಿ ಗುಣಮಟ್ಟ ಪರಿಶೀಲಿಸಿದರು. ಬಳಿಕ ಮೈಲೂರದಲ್ಲಿರುವ ಬಾಲಕಿಯರ ಬಾಲಮಂದಿರಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಬಸವರಾಜ್ ಪಾಟೀಲ್, ಸರ್ಕಾರದ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಘೋಡಂಪಳ್ಳಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ
ಬೀದರ. ಜು.೦೫: ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ೭ ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದರು.
ಸಮೀಪದ ರಸ್ತೆ ಪಕ್ಕದಲ್ಲಿರುವ ಅಪಾಯಕಾರಿಯಾದ ತೆರೆದ ಬಾವಿಗಳನ್ನು ಪರಿಶೀಲಿಸಿದ ಅವರು, ಇಂತಹ ಬಾವಿಗಳನ್ನು ತಕ್ಷಣವೇ ಮುಚ್ಚುವಂತೆ ಸಂಬAಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಸಚಿವರು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ
ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ
ಬೀದರ. ಜು.೦೫: ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಚಿವರು ಕಾಲೇಜಿನ, ತರಗತಿ ಕೊಠಡಿಗಳು, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಾಪಕರು ಹಾಗೂ ಸಿಬ್ಬಂದಿಗಳಿAದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅವರು ಅವರ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯಗಳು ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊAಡಾಗ ಸಚಿವರು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.