Home ಜಿಲ್ಲೆ ಜೋಡು ಕೆರೆ ಅಭಿವೃದ್ಧಿ ಹಾಗೂ ನೀರು ತುಂಬುವ ಕಾರ್ಯ ಪರಿಶೀಲಿಸಿದ ಸಚಿವ ಲಕ್ಷ್ಮಣ ಸವದಿ

ಜೋಡು ಕೆರೆ ಅಭಿವೃದ್ಧಿ ಹಾಗೂ ನೀರು ತುಂಬುವ ಕಾರ್ಯ ಪರಿಶೀಲಿಸಿದ ಸಚಿವ ಲಕ್ಷ್ಮಣ ಸವದಿ

ಅಥಣಿ : ಪಟ್ಟಣದ ಜೋಡು ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಹಕಾರ ಸಚಿವ ಲಕ್ಷ್ಮಣ ಸವದಿ ಭೇಟಿ ನೀಡಿ ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಪರಿಶೀಲಿಸಿದರು.
ಈ ವೇಳೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು
ಕಾಮಗಾರಿಯ ಪ್ರಗತಿ, ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಕೆರೆಗೆ ನೀರು ಹರಿಸುವ ವ್ಯವಸ್ಥೆ ಕುರಿತು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಂದ ವಿವರವಾದ ಮಾಹಿತಿ ಪಡೆದರು.
ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಸಾರ್ವಜನಿಕರ ಅನುಕೂಲ ಹಾಗೂ ಕೆರೆಯ ದೀರ್ಘಕಾಲಿಕ ಬಳಕೆಯನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕೆರೆಯಲ್ಲಿ ಕೊಳವೆಬಾವಿಯನ್ನು ಕೊರೆದು ಅಂತರ್ಜಲ ಹೆಚ್ಚಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಯನ್ನು ಪಡೆದುಕೊಂಡು, ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಜೋಡು ಕೆರೆಯ ಅಭಿವೃದ್ಧಿಯಿಂದ ಪಟ್ಟಣದ ಸೌಂದರ್ಯೀಕರಣಕ್ಕೆ ಉತ್ತೇಜನ ದೊರೆಯುವುದರ ಜೊತೆಗೆ, ನೀರಿನ ಸಂಗ್ರಹ ಸಾಮಥ್ರ್ಯ ಹೆಚ್ಚಿಸುವ ಮೂಲಕ ಸ್ಥಳೀಯರಿಗೆ ಅನುಕೂಲವಾಗಲಿದೆ. ಕೆರೆಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಪೂರ್ಣಗೊಂಡ ಬಳಿಕ ಯೋಜನೆಯ ಉದ್ದೇಶ ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಲಿದೆ ಎಂದು ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು. ಪುರಸಭೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.