“ಅಕ್ಕ ಪಡೆ” ವಾಹನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ,ಜ.27: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಡಿ.ಎ.ಆರ್. ಪೆÇಲೀಸ್ ಪರೇಡ್ ಮೈದಾನದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚುವ “ಅಕ್ಕ ಪಡೆ” ವಾಹನಕ್ಕೆ ಚಾಲನೆ ನೀಡಿದರು.

ಸಂಕಷ್ಟದಲ್ಲಿರುವ ದುರ್ಬಲ, ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ಜೊತೆಗೆ ದೌರ್ಜನ್ಯ, ಹಿಂಸೆ, ನಿರ್ಲಕ್ಷ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಚಾಚಲು ಪ್ರಸಕ್ತ 2025-26ನೇ ಸಾಲಿಗೆ ರಾಜ್ಯದಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೆÇಲೀಸ್ ಇಲಾಖಾ ಸಹಯೋಗದೊಂದಿಗೆ “ಅಕ್ಕ ಪಡೆ” ಕಾರ್ಯಕ್ರಮ ಜಾರಿಗೊಳಿಸಿದೆ. ಅದರಂತೆ ಕಲಬುರಗಿಯಲ್ಲಿಯೂ ಇಂದಿಲ್ಲಿ ಚಾಲನೆ ನೀಡಲಾಗಿದೆ. 4 ಮಹಿಳಾ ಗೃಹ ರಕ್ಷಕರು ಹಾಗೂ ಪೆÇಲೀಸ್ ಸಿಬ್ಬಂದಿ ಒಳಗೊಂಡ “ಅಕ್ಕ ಪಡೆ” ವಾಹನ ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ವರೆಗೆ ಸಂಚರಿಸಿ ಮಹಿಳೆಯರ ರಕ್ಷಣೆ ಮಾಡಲಿದೆ.

ಕರ್ನಾಟಕ ರೇμÉ್ಮ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ನಗರ ಪೆÇಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ ಇದ್ದರು.