
ಗದಗ, ಆ. ೧೦: ಜಿಲ್ಲೆಯಲ್ಲಿ ಉಂಟಾಗಿರುವ ಬರ ಹಾಗೂ ಬೆಳೆ ಹಾನಿಯ ಪರಿಸ್ಥಿತಿಯ ಕುರಿತು ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ ಮೂರನೇ ದಿನವಾದ ರವಿವಾರವೂ ನರಗುಂದ ತಾಲ್ಲೂಕಿನಲ್ಲಿ ಬೆಳೆ ಪರಿಸ್ಥಿತಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನರಗುಂದ ತಾಲ್ಲೂಕಿನ ಚಿಕ್ಕ ನರಗುಂದ ಸರಹದ್ದಿನ ವಿವಿಧ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಹೆಸರು, ಈರುಳ್ಳಿ ಹಾಗೂ ಹತ್ತಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಮಳೆಯ ಕೊರತೆಯಿಂದ ಬೆಳೆಗಳ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ರೈತ ಮುಖಂಡರೊAದಿಗೆ ಸಂವಾದ ನಡೆಸಿದ ಸಚಿವ ಬಸವರಾಜ ರಾಯರಡ್ಡಿ ಅವರು, ಬರದಿಂದ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಬೆಳೆ ಹಾನಿಯ ಪ್ರಮಾಣ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದರು. ರೈತರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸತತ ಮೂರು ದಿನಗಳಿಂದ ಪ್ರವಾಸ ಕೈಗೊಂಡಿರುವ ಸಚಿವರು, ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ವಾಸ್ತವಿಕ ಬೆಳೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಬೆಳೆ ಹಾನಿಯ ಸಮಗ್ರ ಸಮೀಕ್ಷೆ ನಡೆಸಿ ಅಗತ್ಯ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಸಿ. ಪಾಟೀಲ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವಿವೇಕ ಯಾವಗಲ್ ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಜಂಟಿ ನಿರ್ದೇಶಕ ಚಿದಾನಂದ ಸೇರಿದಂತೆ ತಹಶೀಲ್ದಾರರು, ಇಒಗಳು ಹಾಗೂ ತಾಲ್ಲೂಕು ಮಟ್ಟದ ಅ




























