Home ಜಿಲ್ಲೆ ೯೨ ಲಕ್ಷ ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ

೯೨ ಲಕ್ಷ ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ

ಸಂಜೆವಾಣಿ ವಾರ್ತೆ
ಬೀದರ್, ಆ.೪:ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಒಟ್ಟು ?೩.೨೧ ಕೋಟಿ ಅನುದಾನ ಮಂಜೂರಾಗಿದ್ದು, ಅದರಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಗ್ರಾಮದಲ್ಲಿ ಹೊಸ ಅಭಿವೃದ್ಧಿಯ ಚಿತ್ರಣ ಮೂಡಿಸುತ್ತಿವೆ. ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ನೇತೃತ್ವದಲ್ಲಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಇದುವರೆಗೆ ?೨.೨೯ ಕೋಟಿ ವೆಚ್ಚದ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ?೯೨ ಲಕ್ಷ ವೆಚ್ಚದ ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಗಿದೆ.

ಗ್ರಾಮದ ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡು ಪಶು ವೈದ್ಯಕೀಯ, ಆಸ್ಪತ್ರೆ ಕೌಪೌಂಡವಾಲ್, ಸಿಸಿ ರಸ್ತೆಗಳ ನಿರ್ಮಾಣ, ಚರಂಡಿ ವ್ಯವಸ್ಥೆ ಸುಧಾರಣೆ, ಸಮುದಾಯ ಭವನಗಳ ನಿರ್ಮಾಣ, ಹೈಮಾಸ್ಟ್ ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಗಳು ಗ್ರಾಮದಲ್ಲಿ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ಸ್ವಚ್ಛತೆ, ಸಾರ್ವಜನಿಕ ಸುರಕ್ಷತೆ ಮತ್ತು ಮೂಲಭೂತ ಸೌಲಭ್ಯಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲಿವೆ.

ಪೂರ್ಣಗೊಂಡ ಕಾಮಗಾರಿಗಳಿಂದ ಗ್ರಾಮಸ್ಥರಿಗೆ ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆತಿದ್ದು, ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆ, ರಸ್ತೆ ಸಂಚಾರದ ತೊಂದರೆ ಹಾಗೂ ರಾತ್ರಿ ವೇಳೆ ಬೆಳಕಿನ ಕೊರತೆ ಮೊದಲಾದ ಸಮಸ್ಯೆಗಳು ನಿವಾರಣೆಯಾಗಲಿವೆ. ಅಲ್ಲದೆ, ಸಮುದಾಯ ಭವನಗಳು ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು, “ಬಗದಲ ಗ್ರಾಮದ ಸಮಗ್ರ ಅಭಿವೃದ್ಧಿಯೇ ನಮ್ಮ ಪ್ರಮುಖ ಗುರಿಯಾಗಿದೆ. ಜನರ ಬೇಡಿಕೆಗಳಿಗೆ ಸ್ಪಂದಿಸಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳನ್ನು ನಿರ್ಮಿಸುವುದಲ್ಲ, ಜನರ ಜೀವನಮಟ್ಟವನ್ನು ಉತ್ತಮಗೊಳಿಸುವುದು. ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಅಭಿವೃದ್ಧಿಯ ಮಾದರಿಯಾಗಬೇಕು ಎಂಬ ಸಂಕಲ್ಪದೊAದಿಗೆ ಕೆಲಸ ಮಾಡುತ್ತಿದ್ದೇನೆ,” ಎಂದು ಹೇಳಿದರು.

ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟಕ್ಕೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿ, ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಗ್ರಾಮಗಳ ಅಗತ್ಯತೆಗಳನ್ನು ಪರಿಗಣಿಸಿ ರಸ್ತೆ, ಕುಡಿಯುವ ನೀರು, ಚರಂಡಿ, ಬೀದಿ ದೀಪ, ಸಮುದಾಯ ಭವನ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಅನುದಾನವನ್ನು ಸರ್ಕಾರದಿಂದ ತರಲು ನಿರಂತರ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ , ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲಿ ಜನಸಹಭಾಗಿತ್ವಕ್ಕೂ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಗ್ರಾಮಸ್ಥರ ಸಲಹೆ ಹಾಗೂ ಬೇಡಿಕೆಗಳನ್ನು ಆಧರಿಸಿ ಮುಂದಿನ ಹಂತದ ಅಭಿವೃದ್ಧಿ ಕಾಮಗಾರಿಗಳನ್ನು ರೂಪಿಸಲಾಗುವುದು ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಮಳಶಕಾಂತ ಮಹಾರಾಜರು, ಗುರುನಾಥ ರಾಜಗೀರ,ಬಂಡೆಪ್ಪ ಗಡ್ಡಿ, ರೇವಣ್ಣಪ್ಪ ಮೈಲಾರೆ, ಸೋಮನಾಥ ಪೋಶೆಟ್ಟಿ, ಜಗನಾಥ್ ಯಂಕೂರ, ವೈಜಿನಾಥ ಮೇತ್ರೆ, ಬಾಬುರಾವ ಗಂಗಾ, ಸಿದ್ದಪ್ಪಾ ಆಣದೂರ, ಕಾಶಿನಾಥ ಕೋಟೆ, ಅಮೃತರಾವ ಪಾಟೀಲ, ಅಶೋಕ ಹುಡಗಿ, ಬಶೀರ ಸೌದಾಗರ, ಹೇಮಾ ತುಕ್ಕಾರೆಡ್ಡಿ, ಸುರೇಶ ಮಾಶೆಟ್ಟಿ, ಚಂದ್ರಯ್ಯ ಸ್ವಾಮಿ, ಬಸವರಾಜ ಕ್ಯಾಸಾ, ಘಾಳೇಪ್ಪ ಚಟನಳ್ಳಿ, ಸಂಗಯ್ಯ ಸ್ವಾಮಿ, ಕಾಮಣ್ಣ ಬುಕ್ಕಿಗಾರ, ಸಂಗಮೇಶ ಉಪಾರ, ಶಿವಕುಮಾರ ಗೌಡಪ್ಪನೋರ, ಮೊಯಿಜೋದಿನ್, ಶಿವಕುಮಾರ ಪಾಟೀಲ, ಶಶಿಕಾಂತ ಕಲವೆಟ್ಟಿ, ಸಂಗ್ರಾಮ ರಾಜಗೀರ, ಹನ್ನಾನಮಿಯ್ಯಾ, ಸಮಿ ಪಟೇಲ್, ನಾಗಶೆಟ್ಟಿ ಚಟನಳ್ಳಿ, ಸುರೇಶ ಬುಕ್ಕಿಗಾರ, ಪ್ರಮೋದ್ ಕಲ್ಲವಟ್ಟಿ, ಪ್ರಭುರಾವ ರಾಜಗೀರ, ಪ್ರಭುರಾವ, ಕಾಮಾಶೆಟ್ಟಿ ಗಂಗಾ, ಕಾಶಿನಾಥ, ನೀಲಕಂಠ ಮೈಲಾರೆ, ಕಾರ್ತಿಕ ದೇಸಾಯಿ, ಗೋಪಾಲ ವಿಶ್ವಕರ್ಮ, ಮಿಠುಸಿಂಗ, ಮಹಾಂತೇಶ ನಾಟಿಕರ, ಅಮೃತ, ರಜನೀಕಾಂತ, ಸಂತೋಷ, ಸುನೀಕುಮಾರ ಮತ್ತಿತರರು ಉಪಸ್ಥಿತರಿದ್ದರು.

“ನಮ್ಮ ಬಗದಲ ಗ್ರಾಮದಲ್ಲಿ ಹಲವು ವರ್ಷಗಳಿಂದ ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯಗಳ ಕೊರತೆ ಇತ್ತು. ಇದೀಗ ಶಾಸಕರ ಅನುದಾನದಿಂದ ಸಿಸಿ ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿರುವುದು ಸಂತಸದ ವಿಷಯ. ಗ್ರಾಮದ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿರುವ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರಿಗೆ ನಮ್ಮ ಗ್ರಾಮಸ್ಥರ ಪರವಾಗಿ ಅಭಿನಂದನೆಗಳು ತಿಳಿಸಿದರು.


“?೩.೨೧ ಕೋಟಿ ಅನುದಾನದಲ್ಲಿ ಈಗಾಗಲೇ ?೨.೨೯ ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ?೯೨ ಲಕ್ಷ ವೆಚ್ಚದ ಹೊಸ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದರಿಂದ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಮತ್ತಷ್ಟು ಉತ್ತಮವಾಗಲಿವೆ. ಶಾಸಕರು ಗ್ರಾಮಾಭಿವೃದ್ಧಿಗೆ ನೀಡುತ್ತಿರುವ ಆದ್ಯತೆಗೆ ನಾವು ಧನ್ಯವಾದಗಳನ್ನು ತಿಳಿಸುತ್ತೇವೆ ಎಂದರು.