Home ಜಿಲ್ಲೆ ಪಾಪನಾಶದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಪಾಪನಾಶದಲ್ಲಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬೀದರ್: ಶ್ರಾವಣ ಮಾಸದ ಪವಿತ್ರ ಸೋಮವಾರದ ಅಂಗವಾಗಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಪತ್ನಿ ಡಾ. ನೀತಾ ಬೆಲ್ದಾಳೆ ಅವರೊಂದಿಗೆ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧಿ ಪಡೆದಿರುವ ಸುಕ್ಷೇತ್ರ ಶ್ರೀ ಪಾಪನಾಶ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಸ್ಥಾನಕ್ಕೆ ಆಗಮಿಸಿದ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪುಷ್ಪ ನಮನ ಅರ್ಪಿಸಿ, ದೇವರ ಆಶೀರ್ವಾದ ಪಡೆದರು.

ಶ್ರಾವಣ ಮಾಸದ ಸೋಮವಾರದಂದು ಶಿವನ ಆರಾಧನೆಗೆ ವಿಶೇಷ ಮಹತ್ವವಿದ್ದು, ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.

ಸಮಸ್ತ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ. ಪ್ರತಿಯೊಂದು ಕುಟುಂಬವೂ ನೆಮ್ಮದಿ ಮತ್ತು ಸಂತೋಷದಿಂದ ಜೀವನ ನಡೆಸುವಂತಾಗಲಿ ಎಂದು ಶ್ರೀ ದೇವರಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದರು.

ಪವಿತ್ರ ಕ್ಷೇತ್ರದ ದರ್ಶನ ಹಾಗೂ ಪೂಜೆಯ ಮೂಲಕ ಆಧ್ಯಾತ್ಮಿಕ ನೆಮ್ಮದಿ ದೊರೆತಿದ್ದು, ನಾಡಿನ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು.