
ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವುದರ ಜೊತೆಗೆ ಅವರ ಜೀವದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ರೈತರ ಜಮೀನುಗಳಿಗೆ ಪೂರೈಸಲಾಗುತ್ತಿರುವ ವಿದ್ಯುತ್ ಸಮಯವನ್ನು ಬದಲಾಯಿಸಬೇಕು ಎಂದು ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ರಾಜ್ಯ ಸರ್ಕಾರ ಹಾಗೂ ಸಂಬAಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಪ್ರಸ್ತುತ ರೈತರ ಜಮೀನುಗಳಿಗೆ ನಸುಕಿನ ಜಾವ ೩ ಗಂಟೆಯಿAದ ಬೆಳಿಗ್ಗೆ ೧೦ ಗಂಟೆಯವರೆಗೆ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈ ವೇಳಾಪಟ್ಟಿಯನ್ನು ಬದಲಾಯಿಸಿ, ಪ್ರತಿದಿನ ಬೆಳಿಗ್ಗೆ ೫ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ನಿರಂತರವಾಗಿ ಏಳು ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂಬುದು ಶಾಸಕರ ಬೇಡಿಕೆಯಾಗಿದೆ.
ರೈತರು ತಮ್ಮ ಜಮೀನುಗಳಿಗೆ ನೀರು ಹಾಯಿಸಲು ನಸುಕಿನ ಜಾವದಲ್ಲೇ ಮನೆಯಿಂದ ಹೊರಡಬೇಕಾಗುತ್ತದೆ. ಕತ್ತಲಿನಲ್ಲಿ ಜಮೀನುಗಳಿಗೆ ತೆರಳುವಾಗ ಹಾವು, ಚೇಳು ಸೇರಿದಂತೆ ವಿಷಕಾರಿ ಜೀವಿಗಳು ಹಾಗೂ ಇತರ ಕಾಡುಪ್ರಾಣಿಗಳಿಂದ ಅಪಾಯ ಎದುರಾಗುವ ಭೀತಿ ಇರುತ್ತದೆ. ಅಲ್ಲದೆ, ಕತ್ತಲಿನಲ್ಲಿ ಕೃಷಿ ಕೆಲಸಗಳನ್ನು ನಿರ್ವಹಿಸುವುದು ರೈತರಿಗೆ ಸುರಕ್ಷತೆಯ ದೃಷ್ಟಿಯಿಂದಲೂ ಸವಾಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಜೀವದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವುದು ಅಗತ್ಯವಾಗಿದೆ.
ರೈತರು ಬೆಳಗಿನ ಬೆಳಕಿನಲ್ಲಿ ಜಮೀನುಗಳಿಗೆ ತೆರಳಿ ನೀರಾವರಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿದ್ಯುತ್ ಪೂರೈಕೆ ಸಮಯವನ್ನು ಬದಲಾಯಿಸಬೇಕು. ಬೆಳಿಗ್ಗೆ ೫ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ವಿದ್ಯುತ್ ಲಭ್ಯವಾದರೆ ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಸುಗಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ. ಇದರಿಂದ ರಾತ್ರಿ ಹಾಗೂ ಕತ್ತಲಿನ ಸಮಯದಲ್ಲಿ ಜಮೀನುಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗುವುದರ ಜೊತೆಗೆ ರೈತರ ಸುರಕ್ಷತೆಗೂ ಸಹಕಾರಿಯಾಗಲಿದೆ.
ಕೃಷಿಯೇ ರೈತರ ಜೀವನಾಧಾರವಾಗಿದ್ದು, ರೈತರ ಶ್ರಮ, ಸಮಯ ಮತ್ತು ಸುರಕ್ಷತೆಯನ್ನು ಪರಿಗಣಿಸಿ ವಿದ್ಯುತ್ ಪೂರೈಕೆ ವ್ಯವಸ್ಥೆಯನ್ನು ರೂಪಿಸುವುದು ಅತ್ಯಂತ ಮುಖ್ಯವಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂಬAಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅವರ ಅನುಕೂಲಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ವೇಳಾಪಟ್ಟಿಯಲ್ಲಿ ಬದಲಾವಣೆ ತರಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಇಂಧನ ಇಲಾಖೆ ಅಧಿಕಾರಿಗಳು ರೈತರ ಬೇಡಿಕೆಗೆ ಸ್ಪಂದಿಸಿ, ವಿದ್ಯುತ್ ವ್ಯತ್ಯಯ ಹಾಗೂ ಕಡಿಮೆ ವೋಲ್ಟೇಜ್ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆಗ್ರಹಿಸಿದ್ದಾರೆ.
ರೈತರ ಹಿತಾಸಕ್ತಿ ಮತ್ತು ಜೀವದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಪೂರೈಕೆ ಸಮಯವನ್ನು ಬದಲಾಯಿಸಿ, ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.






















