Home ಜಿಲ್ಲೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು” ಕುಟುಂಬಕ್ಕೆ ೫ ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಲಕ್ಷ್ಮಣ ಸವದಿ

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು” ಕುಟುಂಬಕ್ಕೆ ೫ ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಲಕ್ಷ್ಮಣ ಸವದಿ

ಅಥಣಿ: ಏ.೩೦:ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಧನಶ್ರೀ ರವೀಂದ್ರ ಗಸ್ತೆ ಇತ್ತೀಚಿಗೆ ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿದ್ದಳು. ಮೃತ ವಿದ್ಯಾರ್ಥಿನಿಯ ಪಾಲಕರಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಮಂಜೂರಾದ ೫ ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಶಾಸಕ ಲಕ್ಷ್ಮಣ ಸವದಿ ಅವರು ಹಸ್ತಾಂತರಿಸಿದರು.
ಅವರು ಪಟ್ಟಣದ ತಮ್ಮ ನಿವಾಸದಲ್ಲಿ ಮೃತ ವಿದ್ಯಾರ್ಥಿನಿಯ ತಂದೆ-ತಾಯಿಯವರಿಗೆ ಕರೆಸಿ ಚೆಕ್ ಹಸ್ತಾಂತರಿಸಿ ಸಾಂತ್ವನ ಹೇಳಿದರು.
ಈ ವೇಳೆ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ವಿಧ್ಯಾಭ್ಯಾಸ ಮಾಡಿ ಬಡ ಕುಟುಂಬದ ಆಧಾರಸ್ತಂಭವಾಗಬೇಕಿದ್ದ ವಿದ್ಯಾರ್ಥಿನಿ ಧನಶ್ರೀ ಚಿಕ್ಕ ವಯಸ್ಸಿನಲ್ಲೇ ಅಕಾಲಿಕವಾಗಿ ಸಾವನ್ನಪ್ಪಿರುವುದು ವಿಧಿಯಾಟ ಅತ್ಯಂತ ನೋವಿನ ಸಂಗತಿ. ಆಕೆಯ ಕುಟುಂಬಕ್ಕೆ ಉಂಟಾಗಿರುವ ಈ ನಷ್ಟವನ್ನು ತುಂಬಿಕೊಡಲು ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಮಂಜೂರಾದ ಈ ಕಿರು ಪರಿಹಾರ ಧನವು ಆ ಕುಟುಂಬಕ್ಕೆ ಸ್ವಲ್ಪ ಮಟ್ಟಿನ ಆಸರೆಯಾಗಲಿ ಎಂದ ಅವರು ಆ ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಪಾಲಕರಿಗೆ. ಕುಟುಂಬವರ್ಗದವರಿಗೆ ಅವಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ,” ಎಂದರು.
ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮಣ ಢವಳೇಶ್ವರ. ಮುಖಂಡರಾದ ರಾಮನಗೌಡ ಪಾಟೀಲ, ಮಲ್ಲು ಕುಳ್ಳೋಳಿ, ಮಂಜು ಹೋಳಿಕಟ್ಟಿ, ಪರಶುರಾಮ ಸೋನಕರ, ಅನಿಲ ಭೋಸಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು