ಕಮಲನಗರ:ನ.೨೩:ಔರಾದ(ಬಿ) ವಿಧಾನಸಭಾ ಕ್ಷೇತ್ರದ ಚಿಮ್ಮೇಗಾಂವ-ಮಾಳೆಗಾAವ ವ್ಯಾಪ್ತಿಯಲ್ಲಿ ನಿರ್ಮಿಸಲಾಗುತ್ತಿರುವ ಪವರ್ ಗ್ರಿಡ್ ಸೆಂಟರ್ ಉಪ ಕೇಂದ್ರಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ನ.೨೨ರಂದು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.
ಆಡಳಿತ ಕಛೇರಿ, ಟಾವರ್‌ಗಳು, ಕಟ್ಟಡಗಳ ನಿರ್ಮಾಣ ಸೇರಿದಂತೆ ಉಪ ಕೇಂದ್ರಸ ಆವರಣದಲ್ಲಿ ಸಂಚರಿಸಿ ಕೆಲಸದ ಗುಣಮಟ್ಟವನ್ನು ಗಮನಿಸಿದರು. ನಂತರ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಯ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಮಾತನಾಡಿ, ಅತ್ಯಂತ ಹಿಂದುಳಿದ ಪ್ರದೇಶವಾಗಿರುವ ಈ ಭಾಗದಲ್ಲಿ ಜನತೆಗೆ ಉದ್ಯೋಗಾವಕಾಶಗಳು ಲಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶದಿಂದ ನಾನು ಸಚಿವನಾಗಿದ್ದಾಗ ಸಾಕಷ್ಟು ಪ್ರಯತ್ನಪಟ್ಟು ಕ್ಷೇತ್ರಕ್ಕೆ ಯೋಜನೆಯನ್ನು ತಂದಿದ್ದೇನೆ.
೨೧೪೭ ಕೋಟಿ ಮೊತ್ತದ ೬೭೫ ಕೆ.ವಿ ಪವರ್ ಟ್ರಾನ್ಸ್ಮಿಷನ್ ಸಾಮರ್ಥ್ಯದ ಕರ್ನಾಟಕ ಮೊದಲ ಪವರ್ ಗ್ರಿಡ್ ವಿದ್ಯುತ್ ಉಪ ಕೇಂದ್ರ ಇದಾಗಿದೆ. ನಮ್ಮ ಭಾಗದ ಬಹುದೊಡ್ಡ ಯೋಜನೆಯನ್ನು ಗುಣಮಟ್ಟದಿಂದ ಮಾಡಬೇಕು ಮತ್ತು ನಿಗದಿತ ಅವಧಿಯೊಳಗಾಗಿ ಕೆಲಸ ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಪವರ್ ಗ್ರಿಡ್ ಕಾರ್ಪೋರೇಷನ್ ಕಾಮಗಾರಿಗೆ ಇಲ್ಲಿನ ಅನೇಕ ರೈತರು ಜಮೀನು ನೀಡಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಬೇಕು. ಕಾಮಗಾರಿ ಸ್ಥಳದಲ್ಲಿ ನೂರಾರು ಜನರ ಅವಶ್ಯಕತೆ ಇರುತ್ತದೆ. ಇದರಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ತಾಂತ್ರಿಕ ಕೆಲಸಗಳಿಗೆ ಪರಿಣಿತರ ಅವಶ್ಯಕತೆಯಿರುತ್ತದೆ. ಆದರೆ ತಾಂತ್ರಿಕೇತರ ಕೆಲಸಗಳಿಗೆ ಸಾಧ್ಯವಾದಷ್ಟು ಸ್ಥಳೀಯರ ಸೇವೆ ಪಡೆಯಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು.
ರಸ್ತೆ ಬಿಟ್ಟಿಲ್ಲವೆಂದು ಪ್ರತಿದಿನ ನೂರಾರು ರೈತರಿಂದ ಕರೆಗಳು ಬರುತ್ತಿವೆ. ಹಿಂದಿನಿAದಲೂ ಕೃಷಿಯಲ್ಲಿ ತೊಡಗಿಸಿಕೊಂಡ ರೈತರಿಗೆ ಏಕಾಎಕಿ ರಸ್ತೆ ಮುಚ್ಚಿದಲ್ಲಿ ಜಮೀನಿಗೆ ಓಡಾಡಲು ತೀವ್ರ ಸಮಸ್ಯೆಯಾಗುತ್ತದೆ. ಪವರ್ ಗ್ರಿಡ್ ಉಪ ಕೇಂದ್ರದ ಸುತ್ತಲಿನ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕೆಂದು ಸೂಚಿಸಿದಾಗ ಅಧಿಕಾರಿಗಳು ರೈತರಿಗೆ ಅನುಕೂಲವಾಗುಂತೆ ನೋಡಿಕೊಳ್ಳುತ್ತೇವೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಅನೀಲ ಬಿರಾದಾರ, ಶಿವರಾಜ ಅಲ್ಮಾಜೆ, ಪ್ರಹ್ಲಾದ ಚಿಮ್ಮೇಗಾಂವ, ಸಚಿನ ಬಿರಾದಾರ, ರಮೇಶ ಪಾಟೀಲ ಹಂದಿಕೇರಾ, ಧನಾಜಿ ರಾಠೋಡ ಸೇರಿದಂತೆ ಪವರ್ ಗ್ರಿಡ್ ಕಾರ್ಪೋರೇಷನ್ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

























