
ಕಲಬುರಗಿ,ಸೆ.11 : ಬಳ್ಳಾರಿಯಲ್ಲಿ ನಡೆದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಬಳ್ಳಾರಿ ಚಲೋ ಬೃಹತ್ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಬಿ. ಜಿ. ಪಾಟೀಲ ಅವರು ಭಾಗವಹಿಸಿದರು.
ರಾಜ್ಯದ ಜನತೆ ಎದುರಿಸುತ್ತಿರುವ ಸಂಕಷ್ಟಗಳಿಗೆ ಸರ್ಕಾರ ಸಮರ್ಪಕವಾಗಿ ಸ್ಪಂದಿಸಬೇಕೆಂಬ ಒತ್ತಾಯದೊಂದಿಗೆ ನಡೆದ ಈ ಹೋರಾಟವು, ಉತ್ತರದಾಯಿತ್ವಯುತ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ಜನಧ್ವನಿಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ.































