
ನವದೆಹಲಿ, ಅ.೨೧: ಜಪಾನ್ ನ ನೂತನ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾದ ಸನೆ ಟಕೈಚಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತ ಮತ್ತು ಜಪಾನ್ ನಡುವಿನ ಗಾಢವಾದ ಸಂಬಂಧಗಳು ಇಂಡೋ-ಪೆಸಿಫಿಕ್ ಮತ್ತು ಅದರಾಚೆಗಿನ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನಿರ್ಣಾಯಕವಾಗಿವೆ ಎಂದು ಅವರು ಒತ್ತಿ ಹೇಳಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ, “ಜಪಾನ್ ಪ್ರಧಾನಿಯಾಗಿ ಆಯ್ಕೆಯಾದ ಸನೈ ಟಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು
ನೋಡುತ್ತಿದ್ದೇನೆ. ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನಮ್ಮ ಗಾಢವಾದ ಸಂಬಂಧಗಳು ಅತ್ಯಗತ್ಯವಾಗಿವೆ.”ಎಂದು ಹೇಳಿದ್ದಾರೆ.