
ಪಶ್ಚಿಮ ಏಷ್ಯಾ ಸಂಘರ್ಷ
ನವದೆಹಲಿ,ಮಾ.೨೭-ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ದೇಶದ ಸಿದ್ಧತೆ ಮತ್ತು ಯೋಜನೆ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.
ದೇಶದಲ್ಲಿ ಕಚ್ಚಾತೈಲ, ಅನಿಲ, ಅಡುಗೆ ಅನಿಲ ಪೂರೈಕೆ, ರಾಸಾಯನಿಕ ಮತ್ತು ರಸಗೊಬ್ಬರ ಪೂರೈಕೆ ಸೇರಿದಂತೆ ವಿವಿಧ ವಿಷಯಗಳಲ್ಲಿ ತೊಂದರೆ ಮತ್ತು ಅಭಾವ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಹಾಗೂ ಸದ್ಯ ಸರಬರಾಜಾಗುತ್ತಿರುವ ಅನಿಲ ಸಮರ್ಪಕ ಪೂರೈಕೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ವಿಧಾನ ಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಇರುವ ಕಾರಣ. ಈ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ.
ಈ ರಾಜ್ಯಗಳ ಮುಖ್ಯಮಂತ್ರಿಗಳ ಬದಲಾಗಿ ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶ ದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಿಗಧಿಯಾಗಿದೆ
ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏಪ್ರಿಲ್ ೯ ರಂದು ಮತದಾನ ನಡೆಯಲಿದ್ದು, ತಮಿಳುನಾಡಿನಲ್ಲಿ ಏಪ್ರಿಲ್ ೨೩ ರಂದು ಮತದಾನ ನಡೆಯಲಿದೆ. ಮತ್ತೊಂದೆಡೆ, ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ ೨೩ ಮತ್ತು ಏಪ್ರಿಲ್ ೨೯ ರಂದು ಎರಡು ಹಂತಗಳಲ್ಲಿ
ಭಾರತೀಯರ ರಕ್ಷಣೆಗೆ ಆದ್ಯತೆ
ಸಂಘರ್ಷದ ಪರಿಣಾಮದಿಂದ ಭಾರತೀಯರನ್ನು ರಕ್ಷಿಸುವುದು ಕೇಂದ್ರದ ಉದ್ದೇಶವಾಗಿದೆ. ವಿದ್ಯುತ್ ಸ್ಥಾವರಗಳ ಪರಿಸ್ಥಿತಿ ಸಹ ಪರಿಶೀಲಿಸಿದ್ದು ಭಾರತದಲ್ಲಿ ಯಾವುದೇ ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲಿ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಸಂಘರ್ಷ ಮುಂದುವರಿದರೆ ಭಾರತದ ಸನ್ನದ್ಧತೆ ಕುರಿತು ಸಮಾಲೋಚನೆ ನಡೆಸಲಾಗಿದೆ,ಸಭೆಯ ಸಮಯದಲ್ಲಿ, ಪರಿಣಾಮವನ್ನು, ವಿಶೇಷವಾಗಿ ರೈತರ ಮೇಲೆ ಕಡಿಮೆ ಮಾಡಲು ತೆಗೆದುಕೊಳ್ಳಬಹುದಾದ ಪ್ರತಿ-ಕ್ರಮಗಳ ಕುರಿತು ವಿವರವಾದ ಮಾಹಿತಿ ಪಡೆಯಲಾಗಿದೆ ಎಂದಿದ್ದಾರೆ
“ರೈತರಿಗೆ ರಸಗೊಬ್ಬರಗಳ ನಿರಂತರ ಲಭ್ಯತೆ ಖಚಿತಪಡಿಸಿಕೊಳ್ಳುವುದು, ಪ್ರಮುಖ ವಲಯಗಳಿಗೆ ಆಮದು ಮೂಲ ಹೆಚ್ಚಿಸುವುದು ಹೊಸ ತಾಣಗಳಿಗೆ ರಫ್ತುಗಳನ್ನು ಉತ್ತೇಜನ ದೀರ್ಘಾವಧಿಯ ಕ್ರಮಗಳ ಕುರಿತು ನಾವು ವ್ಯಾಪಕ ಚರ್ಚೆ ನಡೆಸಲಾಗಿದೆ. ನಾಗರಿಕರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದ್ದಾರೆ
ಸಂಘರ್ಷದ ಆರಂಭದಿಂದಲೂ ಎಲ್ಲಾ ಗಲ್ಫ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದು ಭಾರತೀಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ






























