ಅಟಲ್ ಪುಣ್ಯ ತಿಥಿ ಮೋದಿ, ದ್ರೌಪದಿ ನಮನ

ನವದೆಹಲಿ,ಆ.೧೬- ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ,ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರು ಹಾಗು ಹಲವು ಗಣ್ಯರು ’ಸದೈವ ಅಟಲ್’ ನಲ್ಲಿ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ರಾಜ್ ಘಾಟ್ ನಲ್ಲಿ ವಾಜಪೇಯಿ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರಕ್ಕೆ ಸಲ್ಲಿಸಿದ ಕೊಡುವೆ ಅಪಾರ ಮತ್ತು ಅನನ್ಯ ಎಂದು ಹೇಳಿದ್ದಾರೆ

ಭಾರತದ ಸರ್ವತೋಮುಖ ಪ್ರಗತಿಗಾಗಿ ಅಟಲ್ ಜೀ ಅವರ ಸಮರ್ಪಣೆ ಮತ್ತು ಸೇವಾ ಮನೋಭಾವ ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡಿದೆ ಎಂದಿದ್ಧಾರೆ.

ಸಚಿವ ರಾಜನಾಥ್ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅಟಲ್ ಬಿಹಾರಿ ವಾಜಪೇಯಿ ಅವರು ಜೀವಮಾನದ ಪ್ರಯತ್ನಗಳು ಸದಾ ಸ್ಮರಣೀಯ. ಅಟಲ್‌ಜಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಜೀವನದುದ್ದಕ್ಕೂ ದೇಶದ ಅಭಿವೃದ್ದಿಗೆ ಕೆಲಸ ಮಾಡಿದ್ದರು. ಅವರ ಅದ್ಭುತ ಕೊಡುಗೆಯನ್ನು ಯಾವಾಗಲೂ ಸ್ಮರಣೀಯ ಎಂದಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯಸಭಾ ಉಪಸಭಾಪತಿ ಹರಿವಂಶ್, ದೆಹಲಿ ದೆಹಲಿ ಮುಖ್ಯಮಂತ್ರೊ ರೇಖಾ ಗುಪ್ತಾ ಮತ್ತು ಇತರರು ಸೇರಿದಂತೆ ಹಲವಾರು ಬಿಜೆಪಿ ನಾಯಕರು ’ಸದೈವ ಅಟಲ್’ ಅವರನ್ನು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರು ೧೯೨೪ರ ಡಿಸೆಂಬರ್ ೨೫ ರಂದು ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ಜನಿಸಿದರು. ಮೂರು ಬಾರಿ ಭಾರತದ ಪ್ರಧಾನಿಯಾಗಿ ಪೂರ್ಣ ಅವಧಿ ಪೂರ್ಣಗೊಳಿಸಿದ ಮೊದಲ ಕಾಂಗ್ರೆಸ್ಸೇತರ ನಾಯಕ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಅವರಿಗೆ ೨೦೧೫ರ ಮಾರ್ಚ್ ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಗಿತ್ತು.